ADVERTISEMENT
Monday, September 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕಠಿಣ ಕ್ರಮ ಕೈಗೊಂಡಿದ್ರೆ ಕೊರೊನಾ ವ್ಯಾಪಿಸುತ್ತಿರುವುದೇಕೆ: ಹೆಚ್‌ಡಿಕೆ…

admin by admin
March 28, 2020
in International, Newsbeat, Samagra karnataka
hdk
Share on FacebookShare on TwitterShare on WhatsappShare on Telegram

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೊರೊನಾ ವಿಚಾರವಾಗಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು ಸರ್ಕಾರದ ಕಾರ್ಯವೈಖರಿಗೆ ಅಸಮಾಧಾನ ಹೊರಹಾಕಿದ್ದಾರೆ.

ಕುಮಾರಸ್ವಾಮಿ ಟ್ವೀಟ್‌ನಲ್ಲಿ ಏನಿದೆ?

ಕೊರೊನಾ ವೈರಸ್ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸರ್ಕಾರದ ಪ್ರತಿನಿಧಿಗಳು ಹೇಳುತ್ತಿರುವುದರ ನಡುವೆಯೇ ಕರ್ನಾಟಕ ಕೊರೊನಾ ಸೋಂಕು ಪೀಡಿತರ ಪಟ್ಟಿಯಲ್ಲಿ ದೇಶದಲ್ಲೇ 3ನೇ ಸ್ಥಾನಕ್ಕೇರಿದೆ. ನಿತ್ಯವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದು ಸರ್ಕಾರದ ‘ಕಟ್ಟುನಿಟ್ಟಿನ ಕ್ರಮ’ಗಳನ್ನು ಪ್ರಶ್ನಿಸುವಂತೆ ಮಾಡಿದೆ ಎಂದು ಬರೆದುಕೊಂಡಿದ್ದಾರೆ.

ಕೊರೊನಾ ವೈರಸ್‌ ಕುರಿತ ಸುದ್ದಿಗಳನ್ನು ಮಾಧ್ಯಮಗಳಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳಿವೆ ಎಂದು ನಾನು ಮೊದಲೇ ಹೇಳಿದ್ದೆ. ಕೊರೊನಾ ನಿಯಂತ್ರಣದ ಜವಾಬ್ದಾರಿ ಒಬ್ಬ ಸಚಿವರ ಹೆಗಲಿಗೆ ವಹಿಸುವ ಮೂಲಕ ಆ ಮುಸುಕಿನ ಗುದ್ದಾಟ ಬಯಲಾಗಿದೆ. ಇದು ಮಾಧ್ಯಮಗಳಲ್ಲೂ ವರದಿಯಾಗಿದೆ. ಈ ಸಂದರ್ಭದಲ್ಲಿ ಪ್ರತಿಷ್ಠೆ ಮುಖ್ಯವಲ್ಲ.
(5/6)

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 28, 2020

ಸೋಂಕು ಶರವೇಗದಲ್ಲಿ ವ್ಯಾಪಿಸುತ್ತಿರುವುದೇಕೆ?
ಪ್ರಧಾನಿ ಹೊರಡಿಸಿದ ಲಾಕ್‌ಡೌನ್ ಆದೇಶದ ಹೊರತುಪಡಿಸಿ, ವೈರಸ್ ತಡೆಗೆ ಸರ್ಕಾರ ಕ್ರಮಗಳನ್ನು ಕೈಗೊಂಡಿರುವುದು ನಿಜವೇ ಆಗಿದ್ದರೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ಸವಲತ್ತು, ರಕ್ಷಣಾ ಕವಚಗಳನ್ನು ಪೂರೈಸಿದ್ದರೆ, ಚಿಕಿತ್ಸೆಗೆ ವೈದ್ಯಕೀಯ ಸಲಕರಣೆಗಳನ್ನು ನೀಡಿದ್ದರೆ ಸೋಂಕು ಶರವೇಗದಲ್ಲಿ ವ್ಯಾಪಿಸುತ್ತಿರುವುದೇಕೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

kumaraswamy

ಇಷ್ಟು ನಿಧಾನದ ಕಾರ್ಯಾಚರಣೆ ಸರಿಯೇ?

ಒಂದು ಸಾವಿರ ವೆಂಟಿಲೇಟರ್, 10 ಲಕ್ಷ ಎನ್95 ಮಾಸ್ಕ್ಗಳು , 5ಲಕ್ಷ ಕಿಟ್, 15ಲಕ್ಷ ತ್ರೀ ಲೇಯರ್ ಮಾಸ್ಕ್ ಖರೀಸುವುದಾಗಿ ಸರ್ಕಾರ ಹೇಳಿ ವಾರವಾಯ್ತು. ಒಂದು ವಾರದಲ್ಲಿ ಸೋಂಕು ತೀವ್ರಗತಿಯಲ್ಲಿ ಏರಿದೆ. ಆದರೆ ಸರ್ಕಾರ ಹೇಳಿರುವುದೆಲ್ಲವೂ ಕಾರ್ಯಗತವಾಗಿದೆಯೇ? ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಸೋಂಕಿನ ವಿರುದ್ಧ ಇಷ್ಟು ನಿಧಾನದ ಕಾರ್ಯಾಚರಣೆ ಸರಿಯೇ?

hdkಪೊಲೀಸರಿಗೂ ರಕ್ಷಣಾ ಕವಚಗಳನ್ನು ವಿತರಿಸಬೇಕು

ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಪ್ರೋತ್ಸಾಹ ಧನ ನೀಡುವಂತೆ ನಾನು ಕೋರಿದ್ದೆ.ಆದರೆ, ರಕ್ಷಣಾ ಕವಚವನ್ನೇ ನೀಡದಿರುವ ಬಗ್ಗೆ ಮಾಹಿತಿ ಇದೆ. ಜನ ರಸ್ತೆಗಳಿಯದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ.ಅವರಿಗೂ ಸೂಕ್ತ ರಕ್ಷಣಾ ಕವಚಗಳಿಲ್ಲ.ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಂತೆ ಪೊಲೀಸರಿಗೂ ರಕ್ಷಣಾ ಕವಚಗಳನ್ನು ವಿತರಿಸಬೇಕು.

Related posts

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

September 7, 2026
ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ

ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ

September 7, 2026

ಈ ಸಂದರ್ಭದಲ್ಲಿ ಪ್ರತಿಷ್ಠೆ ಮುಖ್ಯವಲ್ಲ.

ಕೊರೊನಾ ವೈರಸ್ ಕುರಿತ ಸುದ್ದಿಗಳನ್ನು ಮಾಧ್ಯಮಗಳಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳಿವೆ ಎಂದು ನಾನು ಮೊದಲೇ ಹೇಳಿದ್ದೆ. ಕೊರೊನಾ ನಿಯಂತ್ರಣದ ಜವಾಬ್ದಾರಿ ಒಬ್ಬ ಸಚಿವರ ಹೆಗಲಿಗೆ ವಹಿಸುವ ಮೂಲಕ ಆ ಮುಸುಕಿನ ಗುದ್ದಾಟ ಬಯಲಾಗಿದೆ. ಇದು ಮಾಧ್ಯಮಗಳಲ್ಲೂ ವರದಿಯಾಗಿದೆ. ಈ ಸಂದರ್ಭದಲ್ಲಿ ಪ್ರತಿಷ್ಠೆ ಮುಖ್ಯವಲ್ಲ.

“ಮರಣ ಮೃದಂಗ” ಬಾರಿಸುವ ಕಾಲ ದೂರವಿಲ್ಲ

ಸರ್ಕಾರ ಮೊದಲು ಹೆಚ್ಚಿನ ಪ್ರಮಾಣದಲ್ಲಿ ವೈದ್ಯಕೀಯ ಪರಿಕರಗಳನ್ನು ಹೊಂದಿಸಿಕೊಳ್ಳಬೇಕು.ವೈದ್ಯರಿಗೆ ಸೂಕ್ತ ಸವಲತ್ತುಗಳನ್ನು ನೀಡಬೇಕು.ಘೋಷಣೆಗಳು ಹೇಳಿಕೆಗಳು ಅಷ್ಟಕ್ಕೆ ಸೀಮಿತವಾಗಬಾರದು,ಕಾರ್ಯರೂಪಕ್ಕೆ ಬರಬೇಕು ಇಲ್ಲವಾದರೆ ಜಗತ್ತನ್ನೇ ಆವರಿಸಿರುವ ಮಹಾಮಾರಿ ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ “ಮರಣ ಮೃದಂಗ” ಬಾರಿಸುವ ಕಾಲ ದೂರವಿಲ್ಲ

ಹೀಗೆ ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಹೆಚ್ ಡಿ ಕುಮಾರಸ್ವಾಮಿ ಸರ್ಕಾರದ ಕ್ರಮಗಳನ್ನು ಟೀಕಿಸಿ, ಹಲವು ಸಲಹೆಗಳನ್ನು ನೀಡಿದ್ದಾರೆ.

Tags: HD KUMARASWAMY
ShareTweetSendShare
Join us on:

Related Posts

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ

ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ

by Shwetha
September 7, 2026
0

ಬಳ್ಳಾರಿ: ಕೆಪಿಎಸ್‌ಸಿ ಹುದ್ದೆ ನೇಮಕಾತಿ ಹಗರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳ ಸುರಿಮಳೆಯೇ ಶುರುವಾಗಿದೆ. ಈ ಹಗರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕೈವಾಡವಿದೆ...

ಅಹಿಂದ ಕಾಂಗ್ರೆಸ್ ನ ಸ್ವತ್ತು,ವಿಪಕ್ಷಗಳು ಯಾವ ಬಾಂಬ್ ಬೇಕಾದರೂ ಸಿಡಿಸಲಿ, ನಾನು ಆತುರದಲ್ಲಿಲ್ಲ: ಪ್ರಿಯಾಂಕ್ ಖರ್ಗೆ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್

ಅಹಿಂದ ಕಾಂಗ್ರೆಸ್ ನ ಸ್ವತ್ತು,ವಿಪಕ್ಷಗಳು ಯಾವ ಬಾಂಬ್ ಬೇಕಾದರೂ ಸಿಡಿಸಲಿ, ನಾನು ಆತುರದಲ್ಲಿಲ್ಲ: ಪ್ರಿಯಾಂಕ್ ಖರ್ಗೆ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್

by Shwetha
September 7, 2026
0

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅಬ್ಬರದ ತಿರುಗೇಟು ನೀಡಿದ್ದಾರೆ. ವಿಪಕ್ಷಗಳು...

ಹೆಲಿಕಾಪ್ಟರ್ ನಲ್ಲಿ ಓಡಾಡುವವರು ಪ್ರಜಾಸೇವಕರಾಗಲು ಸಾಧ್ಯವೇ?ಬಡವರ ಹೊಟ್ಟೆಯ ಮೇಲೆ ಹೊಡೆಯುವ ಸರ್ಕಾರಕ್ಕೆ ಮನುಷ್ಯತ್ವ ಇದೆಯೇ?:ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕೆಂಡಾಮಂಡಲ

ಹೆಲಿಕಾಪ್ಟರ್ ನಲ್ಲಿ ಓಡಾಡುವವರು ಪ್ರಜಾಸೇವಕರಾಗಲು ಸಾಧ್ಯವೇ?ಬಡವರ ಹೊಟ್ಟೆಯ ಮೇಲೆ ಹೊಡೆಯುವ ಸರ್ಕಾರಕ್ಕೆ ಮನುಷ್ಯತ್ವ ಇದೆಯೇ?:ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕೆಂಡಾಮಂಡಲ

by Shwetha
September 7, 2026
0

ಗಂಗಾವತಿ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಮತ್ತು ಮುಖ್ಯಮಂತ್ರಿಗಳ ನಡವಳಿಕೆಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿ ಚಲೋ...

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

by Shwetha
September 7, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸ್ವಚ್ಛತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ನೀಡಿದ್ದ ಖಡಕ್ ಹೇಳಿಕೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram