ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಅವರು ತಮ್ಮ ರಾಜೀನಾಮೆ ಬಗ್ಗೆ ಹೇಳಿಕೆ ನೀಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ತುಮಕೂರಿನ ಕೊರಟಗೆರೆದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಅವರು ಸ್ಥಳೀಯ ಕಾರ್ಯಕರ್ತರೊಂದಿಗೆ ಮಾತನಾಡುತ್ತಾ, “ನಿಮಗೆ ಸ್ಪಂದಿಸದೇ ಇರುವುದಕ್ಕಾಗಿ ಕ್ಷಮಿಸಿ. ನೀವು ಹೇಳಿದರೆ ನಾನು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲು ಸಿದ್ಧನಿದ್ದೇನೆ” ಎಂದು ಹೇಳಿದ್ದಾರೆ.
ಈ ಹೇಳಿಕೆಗೆ ಕಾರ್ಯಕರ್ತರು ತಕ್ಷಣ ಪ್ರತಿಕ್ರಿಯಿಸಿ, “ನೀವು ರಾಜ್ಯದ ಮುಖ್ಯಮಂತ್ರಿ ಆಗಬೇಕು” ಎಂದು ಘೋಷಣೆ ಕೂಗಿದ್ದಾರೆ. ಪರಮೇಶ್ವರ್ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾಗಿದೆ, ವಿಶೇಷವಾಗಿ ಸಿಎಂ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಗಳ ನಡುವೆ ಈ ಘಟನೆ ನಡೆದಿದೆ.








