ನವದೆಹಲಿ: ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೀವ್ರ ಕಸರತ್ತು ನಡೆಸಿರುವ ಬೆನ್ನಲ್ಲೇ, ಜಲಸಂಪಮ್ನೂಲ ಸಚಿವ ರಮೇಶ್ ಜಾರಕಿಹೊಳಿ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಟು ಬಿಟ್ಟಿದ್ದು ಹಲವು ನಾಯಕರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡುವ ಉದ್ದೇಶದೊಂದಿಗೆ ತೆರಳಿದ್ದ ರಮೇಶ್ ಜಾರಕಿಹೊಳಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಮೇಶ್ ಜಾರಕಿಹೊಳಿ-ಬಿ.ಎಲ್ ಸಂತೋಷ್ ಭೇಟಿಯಗಿ ಸಮಾಲೋಚನೆ ನಡೆಸಿರುವುದು ಸಚಿವ ಸಂಪುಟ ಕಗ್ಗಂಟಿನ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ.
ಸಂಪುಟ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ವಾಪಸ್ ಆಗಿದ್ದರು. ಅಮಿತ್ ಶಾ ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಪಟ್ಟಿಯನ್ನು ನಡ್ಡಾ ಅವರ ಕೈಗೆ ಕೊಟ್ಟು ಬಂದಿದ್ದಾರೆ/ ಯಡಿಯೂರಪ್ಪ ದೆಹಲಿಗೆ ಹೋಗಿ ವಾಪಸ್ ಬಂದು ಎರಡು ದಿನಗಳಾದರೂ ಹೈಕಮಾಂಡ್‍ನಿಂದ ಯಾವುದೇ ಸುಳಿವು ಸಿಕ್ಕಿಲ್ಲ. ಬಿಎಸ್‍ವೈ ಸೂಚಿಸಿದ ಹೆಸರಿಗೆ ಹೈಕಮಾಂಡ್ ಒಪ್ಪಿಗೆ ನೀಡದಿರುವುದು ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ವಿಳಂಬ ಆಗಲು ಕಾರಣ ಎನ್ನಲಾಗುತ್ತಿದೆ.

ಈ ನಡುವೆ ವಲಸಿಗರಿಗೆ ಸಂಪುಟದಲ್ಲಿ ಆದ್ಯತೆ ನೀಡುತ್ತಿರುವುದಕ್ಕೆ ಮೂಲ ಬಿಜೆಪಿಗರಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಪಕ್ಷ ಕಟ್ಟಿದ ನಮಗೆ ಆದ್ಯತೆ ನೀಡಬೇಕು ಎಂದು ವರಿಷ್ಠರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರ ರಚನೆ ಮಾಡಲು ಕಾರಣರಾದ ವಲಸಿಗರಿಗೆ ಮೊದಲ ಆದ್ಯತೆ ಎಂಬುವುದು ಬಿಎಸ್‍ವೈ ನಿರ್ಧಾರವಾಗಿದೆ. ಈ ಹಿನ್ನೆಲೆಯಲ್ಲಿ ಬಿಎಲ್ ಸಂತೋಷ್ ಅವರನ್ನು ಭೇಟಿ ಮಾಡಿರುವ ರಮೇಶ್ ಜಾರಕಿಹೊಳಿ, ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ವಲಸಿಗರಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








