ಬೆಂಗಳೂರು: ಪೆನ್ ಡ್ರೈವ್ ಕೇಸ್ ನಲ್ಲಿ 16 ವರ್ಷದ ಅಪ್ರಾಪ್ತೆ ಮೇಲೆಯೂ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಕಾಂಗ್ರೆಸ್ ನ ರಾಹುಲ್ ಗಾಂಧಿ ಆರೋಪಿಸಿದ್ದರು. ಆದರೆ, ಅವರಿಗೆ ಏಕೆ ಇದುವರೆಗೂ ನೋಟಿಸ್ ನೀಡಿಲ್ಲ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಹೇಳಿದಂತೆ ಇಲ್ಲಿಯವರೆಗೂ ಅಪ್ರಾಪ್ತ ಸಂತ್ರಸ್ತೆಯರು ಹೇಳಿಕೆ ನೀಡಿಲ್ಲ. ಯಾವ ಆಧಾರದಲ್ಲಿ ರಾಹುಲ್ ಗಾಂಧಿ ಈ ಹೇಳಿಕೆ ಕೊಟ್ಟ ಎಂದು ಪ್ರಶ್ನಿಸಿ ಏಕವಚನದಲ್ಲೇ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಹುಲ್ ಹೇಳಿಕೆಯನ್ನು ಎಸ್ ಐಟಿ ಪರಿಗಣಿಸಬೇಕಿತ್ತು. ಆದರೆ, ಏಕೆ ಇದುವರೆಗೂ ನೋಟಿಸ್ ನೀಡಿಲ್ಲ. ಪೋಕ್ಸೋ ಪ್ರಕರಣ ದಾಖಲು ಮಾಡಲು 16 ವರ್ಷದ ಅಪ್ರಾಪ್ತರನ್ನು ಹುಡುಕಾಡುತ್ತಿದ್ದಾರೆಯೇ? ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.