ಬೆಂಗಳೂರು: ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮೂರು ಬಾರಿ ಭೇಟಿಯಾಗಿದ್ದು ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು.
ಬಿಜೆಪಿಯಲ್ಲಿ ಬಿ.ಎಸ್ ಯಡಿಯೂರಪ್ಪ ನಾಯಕತ್ವ ಬದಲಾವಣೆಗೆ ದೆಹಲಿ ಮಟ್ಟದಲ್ಲಿ ಬಿರುಸಿನ ಕಸರತ್ತು ನಡೆದಿರುವಾಗಲೇ ಬಿಎಸ್‍ವೈ-ಹೆಚ್‍ಡಿಕೆ ಭೇಟಿ ಹಲವು ಊಹಾಪೋಹಗಳಿಗೆ ಆಹಾರ ಒದಗಿಸಿತ್ತು.
ಇದರ ಬೆನ್ನಲ್ಲೇ, ಇಂದು ಮಾಜಿ ಸಿಎಂ ಹಾಗೂ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದಾರೆ. ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವನದ ಕಚೇರಿಯಲ್ಲಿ ಕುಮಾರಸ್ವಾಮಿ, ಜಗದೀಶ್ ಶೆಟ್ಟರ್ ಮಾತುಕತೆ ನಡೆಸಿರುವುದು ಮತ್ತಷ್ಟು ಕುತೂಹಲ ಹೆಚ್ಚಿಸುವಂತೆ ಮಾಡಿದೆ.
ಬಿಜೆಪಿ ಸರ್ಕಾರ ಅಸ್ವಿತ್ವಕ್ಕೆ ಬಂದ ನಂತರ ಜಗದೀಶ್ ಶೆಟ್ಟರ್ ಅವರನ್ನು ಹೆಚ್‍ಡಿಕೆ ಭೇಟಿಯಾಗಿರುವುದು ಇದೇ ಮೊದಲು.
ಬಿಜೆಪಿಯಲ್ಲಿ ಬಿಎಸ್‍ವೈ ಸ್ಥಾನಕ್ಕೆ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರನ್ನು ತರಲು ಪ್ರಯತ್ನ ನಡೆದಿತ್ತು ಎಂಬ ಸುದ್ದಿ ಬಹಿರಂಗವಾದ ನಂತರ ಜಗದೀಶ್ ಶೆಟ್ಟರ್, ಕುಮಾರಸ್ವಾಮಿ ಭೇಟಿಯಾಗಿ ಚರ್ಚೆ ನಡೆಸಿರುವುದು ರಾಜಕೀಯದ ಮಟ್ಟಿಗೆ ಮಹತ್ವ ಪಡೆದುಕೊಂಡಿದೆ.
ಜೆಡಿಎಸ್ ಮೂಲಗಳ ಪ್ರಕಾರ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ವಶಪಡಿಸಿಕೊಂಡಿರುವ ರೈತರ ಜಮೀನನ್ನು ವಾಪಸ್ ನೀಡುವಂತೆ ಕೈಗಾರಿಕಾ ಸಚಿವರೂ ಆದ ಜಗದೀಶ್ ಶೆಟ್ಟರ್ ಅವರನ್ನು ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ ಎಂದು ಹೇಳುತ್ತಿವೆ. ಆದರೂ ಕೂಡ ಕುಮಾರಸ್ವಾಮಿ ಸಿಎಂ ಹಾಗೂ ಸಚಿವರನ್ನು ಭೇಟಿ ಇತ್ತೀಚೆಗೆ ಹೆಚ್ಚು ಭೇಟಿ ಮಾಡುತ್ತಿರುವುದರ ಹಿಂದೆ ಏನಾದರೂ ರಹಸ್ಯ ಇದೆಯಾ ಎಂಬುದು ಸದ್ಯದ ಕುತೂಹಲವಾಗಿದೆ.
ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ
ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ಕೇವಲ ಮನರಂಜನೆಯ ತಾಣಗಳಾಗಿ ಉಳಿದಿಲ್ಲ. ಅವು ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತುವ ಶಕ್ತಿಯುತ ಅಸ್ತ್ರಗಳಾಗಿ ಬದಲಾಗಿವೆ. ಇತ್ತೀಚೆಗೆ ಸುಪ್ರೀಂ ಕೋರ್ಟ್...








