ನಮ್ಮ ದೇಹಕ್ಕೆ ವಿಟಮಿನ್ ಸಿ ಏಕೆ ಮುಖ್ಯ? ವಿಟಮಿನ್ ಸಿ ಸಮೃದ್ಧವಾಗಿರುವ ಆಹಾರಗಳು ಯಾವುವು?
ಕೊರೊನಾವೈರಸ್ ಸಾಂಕ್ರಾಮಿಕದಿಂದ ಜನರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನೋಡುತ್ತಿದ್ದಾರೆ. ಜನರು ಕೋವಿಡ್ ಹಾಗೂ ಇತರ ವೈರಲ್ ಸೋಂಕಿನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ರೋಗನಿರೋಧಕ ಶಕ್ತಿ ಅವಶ್ಯಕ. ಇದಕ್ಕಾಗಿ, ಮೊದಲನೆಯದಾಗಿ, ಜನರು ತಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸಬೇಕು ರೋಗಗಳಿಂದ ದೂರವಿರಿಸಲು ಮತ್ತು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಪ್ರತಿದಿನ ವ್ಯಾಯಾಮ ಮಾಡುವುದು ಮತ್ತು ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳುವುದು ಸಹ ಬಹಳ ಮುಖ್ಯ. ಈ ಸಮಯದಲ್ಲಿ ವಿಟಮಿನ್ ಸಿ ಸಮೃದ್ಧವಾಗಿರುವ ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನುವುದು ಅಗತ್ಯವಾಗಿದೆ.

ವಿಟಮಿನ್ ಸಿ ಏಕೆ ಮುಖ್ಯ?
ವಿಟಮಿನ್ ಸಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಮತ್ತು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುವುದಲ್ಲದೆ ದೇಹವನ್ನು ಅನೇಕ ವೈರಲ್ ರೋಗಗಳಿಂದ ರಕ್ಷಿಸುತ್ತದೆ.
ಕಿತ್ತಳೆ ಹಣ್ಣು
ಕಿತ್ತಳೆಯಲ್ಲಿ ವಿಟಮಿನ್ ಸಿ, ಫೈಬರ್, ಥಯಾಮಿನ್ ಮತ್ತು ಪೊಟ್ಯಾಸಿಯಮ್ ಪದಾರ್ಥಗಳು ಸಮೃದ್ಧವಾಗಿವೆ. ಅಲ್ಲದೆ, ಅದರ ಗ್ಲೈಸೆಮಿಕ್ ಸೂಚ್ಯಂಕವು ಕಡಿಮೆಯಾಗಿದೆ. ಅಂದರೆ ಮಧುಮೇಹ ಮತ್ತು ಸ್ಥೂಲಕಾಯದಿಂದ ಬಳಲುತ್ತಿರುವ ಜನರಿಗೆ ಸಹ ಇದು ತುಂಬಾ ಪ್ರಯೋಜನಕಾರಿಯಾಗಿದೆ.
ನಿಂಬೆ
ನಿಂಬೆ, ವಿಟಮಿನ್ ಸಿ ಮತ್ತು ಸಿಟ್ರಿಕ್ ಆಮ್ಲದಲ್ಲಿ ಸಮೃದ್ಧವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಇದರಲ್ಲಿರುವ ಸಿಟ್ರಿಕ್ ಆಮ್ಲವು ದೇಹದ ಕೊಬ್ಬನ್ನು ಕಡಿಮೆ ಮಾಡಲು ಕೆಲಸ ಮಾಡುತ್ತದೆ. ನಿಂಬೆ ತಿನ್ನುವುದು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ವಾಸ್ತವವಾಗಿ, ದೇಹವನ್ನು ಆರೋಗ್ಯವಾಗಿಡಲು, ನಿಂಬೆ ರಸವನ್ನು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪದೊಂದಿಗೆ ಉಗುರುಬೆಚ್ಚಗಿನ ನೀರಿನಲ್ಲಿ ಕುಡಿಯಬೇಕು.
ನೆಲ್ಲಿಕಾಯಿ
ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಜೊತೆಗೆ ಹೆಚ್ಚಿನ ಪ್ರಮಾಣದ ಕಬ್ಬಿಣ, ಫೋಲೇಟ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳಿವೆ. ಆಯುರ್ವೇದದ ಪ್ರಕಾರ, ಇದು ವಾತ, ಪಿತ್ತ ಮತ್ತು ಕಫ ಎಂಬ ಮೂರು ವಿಧದ ದೋಶಗಳನ್ನು ನಿಯಂತ್ರಿಸುತ್ತದೆ.
ಪಪ್ಪಾಯಿ
ಪಪ್ಪಾಯಿ ಅದರ ನೈಸರ್ಗಿಕ ವಿರೇಚಕ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಇದು ಜೀರ್ಣ ಶಕ್ತಿಯನ್ನು ಬಲಪಡಿಸುತ್ತದೆ. ಪಪ್ಪಾಯಿಯನ್ನು ವಿಟಮಿನ್ ಸಿ ಯ ಉತ್ತಮ ಮೂಲವೆಂದು ಪರಿಗಣಿಸಲಾಗುತ್ತದೆ ಮತ್ತು ಪಪ್ಪಾಯಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಇದಲ್ಲದೇ, ಪಪ್ಪಾಯಿ ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ರೋಗಗಳು ದೂರವಾಗುತ್ತವೆ.
ಸೀಬೆಹಣ್ಣು
ವಿಟಾಮಿನ್ ಸಿ ಯಿಂದ ಸಮೃದ್ಧವಾಗಿರುವುದರ ಜೊತೆಯಲ್ಲಿ, ನಾರಿನಂಶವು ಫೈಬರ್ ಮತ್ತು ಪೊಟ್ಯಾಸಿಯಮ್ ನಂತಹ ಖನಿಜಗಳಿಂದ ಕೂಡಿದೆ. ಪೇರಲೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ. ಇದಲ್ಲದೇ ಪೇರಲೆ ಹೃದಯವನ್ನು ಆರೋಗ್ಯವಾಗಿರಿಸುತ್ತದೆ ಮತ್ತು ದೇಹದಲ್ಲಿ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತದೆ.
ದೊಣ್ಣೆ ಮೆಣಸಿನ ಕಾಯಿ
ಕ್ಯಾಪ್ಸಿಕಂ ವಿಟಮಿನ್ ಸಿ, ಇ ಮತ್ತು ಎ, ಫೈಬರ್ ಮತ್ತು ಫೋಲೇಟ್ ಹಾಗೂ ಪೊಟ್ಯಾಸಿಯಮ್ ನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಫೋಲೇಟ್ ಹಿಮೋಗ್ಲೋಬಿನ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
https://twitter.com/SaakshaTv/status/1421675136722276356?s=19
https://twitter.com/SaakshaTv/status/1421661026471321603?s=19
https://twitter.com/SaakshaTv/status/1421297706144866314?s=19
https://twitter.com/SaakshaTv/status/1421267522712649730?s=19
#VitaminC #RichFoods








