ಬೆಂಗಳೂರು: ರಾಜ್ಯರಾಜಕೀಯದಲ್ಲಿ ಕುತೂಹಲಕಾರಿ ಬೆಳವಣಿಗೆಯೊಂದು ನಡೆದಿದೆ. ರಾಜಕೀಯ ಕಡುವಿರೋಧಿಗಳಾದ ಹಾಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿರುವುದು ರಾಜ್ಯ ರಾಜಕೀಯದಲ್ಲಿ ಅಂತೆ-ಕಂತೆಗಳಿಗೆ ಪುಷ್ಠಿ ನೀಡಿದೆ.
ಕಳೆದ ವರ್ಷ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾದ ಬಳಿಕ ಇದೇ ಮೊದಲ ಬಾರಿಗೆ ರಾಜಕೀಯ ಎದುರಾಳಿಗಳು ಪರಸ್ಪರ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
ಇಂದು ದಿಡೀರ್ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮರಸ್ವಾಮಿ, ಸಿಎಂ ಯಡಿಯೂರಪ್ಪ ಜತೆ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಹೀಗಾಗಿ ಉಭಯ ನಾಯಕರ ಭೇಟಿ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಎರಡು ದಿನಗಳ ಹಿಂದೆ ಸುರಿದ ಧಾರಾಕಾರ ಮಳೆಯಿಂದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸುರಿದ ಚಿಕ್ಕಬಾಣಾವರದಲ್ಲಿ ಪ್ರವಾಹ ಉಂಟಾಗಿ ಹಲವು ಮನೆಗಳಿಗೆ ನೀರು ನುಗ್ಗಿತ್ತು. ಮಳೆಯಿಂದ ಆದ ಅಪಾರ ನಷ್ಟಕ್ಕೆ ಸರ್ಕಾರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಸಿಎಂ ಬಿಎಸ್‍ವೈಗೆ ಮನವಿ ಮಾಡಿದ್ದಾರೆ. ಈ ಭೇಟಿ ವೇಳೆ, ದಾಸರಹಳ್ಳಿ ಜೆಡಿಎಸ್ ಶಾಸಕ ಮಂಜುನಾಥ್ ಕೂಡ ಕುಮಾರಸ್ವಾಮಿ ಜೊತೆಗಿದ್ದರು.
ದಾಸರಹಳ್ಳಿ ಮಾತ್ರವಲ್ಲದೆ ರಾಮನಗರ ಕ್ಷೇತ್ರಕ್ಕೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಮಾತುಕತೆಗೆ ಕುಮಾರಸ್ವಾಮಿ ಬಂದಿದ್ದರು. ಆದರೆ, ಈ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ರಾಜಕೀಯ ವಿಚಾರದ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ಮಾಹಿತಿ ನೀಡಿವೆ.
ಸಿಎಂ ಯಡಿಯೂರಪ್ಪ ಭೇಟಿ ನಂತರ ಮಾತನಾಡಿದ ಕುಮಾರಸ್ವಾಮಿ, ಮಳೆಯಿಂದ ದಾಸರಹಳ್ಳಿ ಕ್ಷೇತ್ರದಲ್ಲಿ ಭಾರಿ ಹಾನಿ ಆಗಿದೆ. ಹೀಗಾಗಿ ಪರಿಹಾರ ಒದಗಿಸುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ಬಂದಿದ್ದಾಗಿ ಸ್ಪಷ್ಟಪಡಿಸಿದ್ದಾರೆ.
ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್
ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವಾಹನ ಪ್ರೇಮ ಇಡೀ ದೇಶಕ್ಕೇ ಗೊತ್ತು. ಅವರ ಬಳಿ ಇರುವ ಐಷಾರಾಮಿ ಕಾರುಗಳ ಸಾಲಿಗೆ ಈಗ ವಿಮಾನದಂತಹ...








