ಶ್ರೀಲಂಕಾದಲ್ಲಿ ಲೀಟರ್ ಪೆಟ್ರೋಲ್ ಗೆ 338ರೂ | ಸರಕಾರದ ವಿರುದ್ಧ ಜನರ ಪ್ರತಿಭಟನೆ
ಶ್ರೀಲಂಕಾ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದು, ಪೆಟ್ರೊಲ್ ಬೆಲೆಯನ್ನು 84ರೂ ಏರಿಕೆ ಮಾಡಲಾಗಿದೆ.
ಇದರಿಂದಾಗಿ ಒಂದು ಲೀಟರ್ ಪೆಟ್ರೋಲ್ ಬೆಲೆ 338 ರೂ.ಗೆ ಏರಿಕೆ ಮಾಡಲಾಗಿದೆ. ಈ ಸಂಭಂದ ಮಂಗಳವಾರ ರುಂಕ್ಕನ ಪ್ರದೇಶದಲ್ಲಿ ಜನರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ಏರ್ಪಟ್ಟಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಮಂಗಳವಾರ ಪ್ರತಿಭಟನಾಕಾರರು ರಂಬುಕ್ಕನದಲ್ಲಿ ರೈಲು ಮಾರ್ಗದ ಬಳಿ ಪ್ರತಿಭಟನೆ ನಡೆಸಿದ್ದರು. ಭದ್ರತಾ ಸಿಬ್ಬಂದಿ ರೈಲು ಮಾರ್ಗವನ್ನು ತೆರವುಗೊಳಿಸುವಂತೆ ಕೇಳಿದಾಗ, ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಅಲ್ಲಿಂದ ಚದುರಿಸಲು ಪ್ರಯತ್ನಪಟ್ಟರೂ ವಾಹನಗಳಿಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವೇಳೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಸಾಧ್ಯವಾಗದೇ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಈ ವೇಳೆ ಗುಂಡು ತಗುಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 12 ಮಂದಿಗೆ ಗಾಯಗಳಾಗಿವೆ. 12 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.