ತಿರುವನಂತಪುರಂ: ಮುಂಬರುವ ಮಂಗಳವಾರದವರೆಗೆ ಕೇರಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕೇರಳದ (Kerala Rain) ಬಹುತೇಕ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹೀಗಾಗಿ ಕೇರಳದ 9 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ನೈಋತ್ಯ ಮಾನ್ಸೂನ್ ಮೇ 19ರ ವೇಳೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪುವ ನಿರೀಕ್ಷೆಯಿದೆ. ಆನಂತರ ಮುಂಗಾರು ಮೇ 29 ಮತ್ತು ಜೂನ್ 1ರ ನಡುವೆ ಕೇರಳವನ್ನು ಅಪ್ಪಳಿಸಬಹುದು. ಸಾಮಾನ್ಯವಾಗಿ, ಜೂನ್ 10ರೊಳಗೆ ಮುಂಗಾರು ಮಹಾರಾಷ್ಟ್ರ ಪ್ರವೇಶಿಸುತ್ತದೆ. ಈ ಬಾರಿ ಸರಿಯಾದ ಸಮಯಕ್ಕೆ ಗಮಿಸುವ ಸಾಧ್ಯತೆ ಇದೆ.
ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಎರ್ನಾಕುಲಂ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್ ಜಿಲ್ಲೆಗಳಲ್ಲಿ ಮಂಗಳವಾರ ಹಳದಿ ಅಲರ್ಟ್ ಘೋಷಿಸಲಾಗಿತ್ತು. ಕರ್ನಾಟಕದಲ್ಲಿ ಕೂಡ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.