ನಾಳೆಯಿಂದ 8 ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆ
ಬೆಂಗಳೂರು : ನಾಳೆಯಿಂದ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.
ಆಗಸ್ಟ್ 6 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.
ಇದಲ್ಲದೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನಾಳೆ ಮತ್ತು ನಾಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.









