ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಹಾಸನ, ಮಲೆನಾಡಿನ ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ.
ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರದ ಹಲವು ಪ್ರದೇಶಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಈಗಾಗಲೇ ಮಳೆ ಆರಂಭವಾಗಿದ್ದು, ಬಿತ್ತನೆ ಕಾರ್ಯಗಳು ಚುರುಕುಗೊಂಡಿವೆ.