ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಶಿವಮೊಗ್ಗ, ಕೊಡಗು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು(ಮೇ 27) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮೇ 31ರಂದು ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ.