ರಾಜ್ಯಕ್ಕೆ ಇನ್ನೂ ಮುಂಗಾರು ಪ್ರವೇಶವಾಗಿಲ್ಲ. ಈ ಸಂದರ್ಭದಲ್ಲಿಯೇ ಹಲವೆಡೆ ಮಳೆಯಾಗುತ್ತಿರುವ ವರದಿಗಳು ಕೂಡ ಆಗುತ್ತಿವೆ.
ಜೂನ್ 8 ರಂದು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಘುವ ಸಾಧ್ಯತೆ ಇದೆ. ಅಲ್ಲದೇ, ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳ್ಲಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಕೇರಳ ಕರಾವಳಿಯಲ್ಲಿ ಮೋಡಗಳ ಚಲನೆ ತೀವ್ರವಾಗಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದನ್ನು ಗಮನಿಸಿದರೆ ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಬಹುದು.








