ಜುಲೈ 27ರವರೆಗೂ ರಾಜ್ಯಾದ್ಯಂತ ವ್ಯಾಪಕ ಮಳೆ : ಹವಾಮಾನ ಇಲಾಖೆ
ಬೆಂಗಳೂರು : ಜುಲೈ 27 ರವರೆಗೂ ರಾಜ್ಯಾದ್ಯಾಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದರಲ್ಲೂ ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಈ ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದಲ್ಲದೆ ರಾಜ್ಯದಲ್ಲಿ ಮಳೆ ಅಬ್ಬರ ಹೀಗೆ 5 ದಿನ ಕಾಲ ಮುಂದುವರಿಯಲಿದ್ದು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ಯಾದಗಿರಿ ಜಲ್ಲೆಗಳಿಗೆ ಜುಲೈ 24ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇನ್ನು ರಾಜ್ಯದಲ್ಲಿ ಈಗಾಗಲೇ ವರುಣನ ಆರ್ಭಟಕ್ಕೆ ಮೂವರನ್ನು ಬಲಿ ಪಡೆದುಕೊಂಡಿದೆ. ಬೆಳಗಾವಿ ಭಾಗದಲ್ಲಿ ಸಾಕಷ್ಟು ಗ್ರಾಮಗಳು ಜಲಾವೃತ್ತವಾಗಿವೆ.
ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಬೆಂಗಳೂರಿನಲ್ಲಿ 999 ಹೆಡ್ ಕಾನ್ಸ್ಟೇಬಲ್ಗಳ ವರ್ಗಾವಣೆ









