ದಿಮಾಪುರ: ದೇಶದ ಹಲವು ರಾಜ್ಯಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಹಲವೆಡೆ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.
ಕೇರಳದಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದು ನೂರಾರು ಜನರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಆಂಧ್ರ-ತೆಲಂಗಾಣದಲ್ಲಿ ಪ್ರವಾಹ ಉಂಟಾಗಿ ಜನ- ಜೀವನ ಅಸ್ತವ್ಯಸ್ಥಗೊಂಡಿತ್ತು. ಈಗ ನಾಗಾಲ್ಯಾಂಡ್ ನಲ್ಲಿ (Nagaland) ನಲ್ಲಿ ಭಾರೀ ಮಳೆಯಾಗಿ ಜನರಿಗೆ ತೊಂದರೆಯಾಗಿದೆ.
ನಾಗಲ್ಯಾಂಡ್ ನಲ್ಲಿ ವ್ಯಾಪಕ ಮಳೆಯಿಂದಾಗಿ (Rain) ಚುಮೌಕೆಡಿಮಾ (Chumoukedima) ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-29ರ ಒಂದು ಪ್ರದೇಶದ ಕುಸಿದ ಪರಿಣಾಮ 6 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಕೊಹಿಮಾದಾ (Kohima) ನ್ಯೂ ಚುಮೌಕೆಡಿಮಾ ಮತ್ತು ಫೆರಿಮಾ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ಭೂಕುಸಿತದ ಪರಿಣಾಮ ಮಣ್ಣಿನಡಿಯಲ್ಲಿ ಸಿಲುಕಿದ್ದ 6 ಜನರನ್ನು ರಾಜ್ಯ ವಿಪತ್ತು ಪಡೆ ಹೊರತೆಗೆದಿದೆ. ಅಲ್ಲದೇ, ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಭೂ ಕುಸಿತದಿಂದ ಅನೇಕರು ಕಾಣೆಯಾಗಿದ್ದಾರೆ ಎಂದು ವರದಿಗಳು ಹೇಳಿವೆ.