ಚಂಡೀಗಢ: ವ್ಯಕ್ತಿಯೊಬ್ಬ ತನ್ನ ಪತ್ನಿ ಬೇರೊಬ್ಬನ ಜೊತೆ ಕಾರಿನಲ್ಲಿ ಕುಳಿತುಕೊಂಡು ಚಕ್ಕಂದವಾಡುತ್ತಿದ್ದದ್ದನ್ನು ಕಂಡ, ಸಾರ್ವಜನಿಕವಾಗಿಯೇ ಥಳಿಸಿರುವ ಘಟನೆ ನಡೆದಿದೆ.
ಈ ಘಟನೆ ಹರಿಯಾಣದಲ್ಲಿ ನಡೆದಿದೆ. ಅಲ್ಲಿಯ ಪಂಚುಕಾದ ಪಾರ್ಕ್ ಹತ್ತಿರ ಮಹಿಳೆ ಕಾರಿನಲ್ಲಿ ಬೇರೆ ವ್ಯಕ್ತಿಯೊಂದಿಗೆ ಕುಳಿತುಕೊಂಡಾಗ ಪತಿ ಕೈಗೆ ಸಿಕ್ಕಿಬಿದ್ದಿದ್ದಾಳೆ. ಇದನ್ನು ನೋಡಿದ ಪತಿ, ಕಾರಿನ ಗ್ಲಾಸ್ ಒಡೆದು ಆಕೆಯನ್ನು ಕಾರಿನಿಂದ ಎಳೆದು ಸಾರ್ವಜನಿಕವಾಗಿಯೇ ಹಲ್ಲೆ ನಡೆಸಿದ್ದಾನೆ.
ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡು, ಪತ್ನಿ ಮೇಲೆ ಹಲ್ಲೆ ನಡೆಸಿರುವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಹಿಳೆ ಜೋರಾಗಿ ಕಿರುಚುತ್ತಿದ್ದಂತೆ ಅಲ್ಲಿದ್ದ ಸ್ಥಳೀಯರು ಮಹಿಳೆಯನ್ನು ರಕ್ಷಿಸಿದ್ದಾರೆ.