ಚಿಕ್ಕಬಳ್ಳಾಪುರ : ಮಹಿಳೆಯೊಬ್ಬರು ಮೂರು ವರ್ಷದ ಮಗುವನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಸಂಶಯಾತ್ಮಕ ಘಟನೆಯೊಂದು ನಡೆದಿದೆ.
ಈ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಿರೂಪಸಂದ್ರ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದಾಗಿ ಈ ಘಟನೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ. ಸುಧಾರಾಣಿ (32) ಎಂಬ ಮಗಳು ತನ್ನ ಮಗಳು ಸಾನ್ವಿಯ (3) ಕತ್ತು ಹಿಸುಕಿ ಕೊಲೆ ಮಾಡಿ ತಾನೂ ಬಾವಿಗೆ ಹಾರಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ.
ಸುಧಾರಾಣಿ ಗ್ರಾಮದ ರವಿ ಎಂಬಾತನೊಂದಿಗೆ ವಿವಾಹವಾಗಿದ್ದರು. ಇಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಪತಿಯ ಮೇಲಿನ ಕೋಪಕ್ಕೆ ಮಗುವನ್ನು ಸಾಯಿಸಿ, ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಗುರುವಾರ ಮನೆಯಿಂದ ಹೊರಗೆ ಹೋಗಿದ್ದ ಪತಿ ಮನೆಗೆ ಬಂದಿರಲಿಲ್ಲ. ರವಿ ನಾಪತ್ತೆ ಹಿಂದೆ ಸಣ್ಣ ಅನುಮಾನ ಇದ್ದು, ಹೆಂಡತಿ (Wife) ಮಗಳನ್ನು ಕೊಂದು ಪರಾರಿಯಾದನಾ ಎಂಬ ಸಣ್ಣ ಅನುಮಾನವೂ ಇದೆ. ಈ ನಡುವೆ ವರದಕ್ಷಿಣೆ ಕಿರುಕುಳದ ಪ್ರಕರಣವೂ ರವಿ ವಿರುದ್ಧ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ಸದ್ಯ ಈ ಕುರಿತು ಗೌರಿಬಿದನೂರು ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.








