ಬೆಂಗಳೂರಿನ ಬನಶಂಕರಿ ಎರಡನೇ ಹಂತದ ಸಮೀಪ ಇರುವ ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ವಾಸಿಸುತ್ತಿದ್ದ ಸ್ಯಾಂಡಲ್ ವುಡ್ ನಿರ್ಮಾಪಕ ಟಿ.ಚಂದ್ರಶೇಖರ್ ಎಂಬುವವರು ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಕೋರ್ಟ್ ಮೆಟ್ಟಿಲು ಏರಿದ್ದಾರೆ.
ಪತ್ನಿ ಡ್ರಗ್ಸ್ ವ್ಯಸನಿ ಹಾಗೂ ಡ್ರಗ್ಸ್ ಗಾಗಿ ಡ್ರಗ್ ಪೆಡ್ಲರ್ ಜೊತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ದೂರಿದ್ದಾರೆ. ಮನೆಯಲ್ಲಿ ಪತ್ನಿ ಹಾಗೂ ಡ್ರಗ್ ಪೆಡ್ಲರ್ ದೈಹಿಕ ಸಂಪರ್ಕದಲ್ಲಿದ್ದ ವೇಳೆ ನೋಡಿ ಪ್ರಶ್ನಿಸಿದಾಗ ಇಬ್ಬರೂ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಡ್ರಗ್ಸ್ ವ್ಯಸನಿಯಾಗಿರುವ ಪತ್ನಿ, ಡ್ರಗ್ಸ್ ಗಾಗಿ ಪೆಡ್ಲರ್ ಲಕ್ಷ್ಮೀಶ್ ಪ್ರಭುನೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದಾಳೆ. ಡ್ರಗ್ ಸೇವಿಸುವುದನ್ನು ಬಿಡಿಸಲು ಸಾಕಷ್ಟು ಪ್ರಯತ್ನಿಸಿದೆ. ಆದರೆ, ಅವಳು ಬಿಡಲಿಲ್ಲ ಎಂದು ದೂರಿನಲ್ಲಿ ಹೇಳಿದ್ದಾರೆ.
ಇನ್ನೊಂದೆಡೆ ಪತಿಯ ವಿರುದ್ಧ ಪತ್ನಿ ಕೂಡ ಮರು ದೂರು ದಾಖಲಿಸಿ, ಪತಿಯು ಮನೆಯಲ್ಲಿ ಡ್ರಗ್ಸ್ ಇಟ್ಟು ಅರೆಸ್ಟ್ ಮಾಡಿಸುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದ. ಅಲ್ಲದೇ, ನನ್ನ ಸ್ನೇಹಿತ ಲಕ್ಷ್ಮೀಶ್ ಪ್ರಭು ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.








