ಕಾಶ್ಮೀರ ಕಣಿವೆಯ 15 ರೈಲು ನಿಲ್ದಾಣಗಳಲ್ಲಿ – ವೈಫೈ ಸೌಲಭ್ಯ
ಶ್ರೀನಗರ ಸೇರಿದಂತೆ ಕಾಶ್ಮೀರ ಕಣಿವೆಯ ಎಲ್ಲಾ 15 ರೈಲು ನಿಲ್ದಾಣಗಳಲ್ಲಿ ವೈಫೈ ನೆಟ್‌ವರ್ಕ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಭಾರತೀಯ ರೈಲ್ವೆ ಇಲಾಖೆಯು ಮಾಹಿತಿ ನೀಡಿದೆ. ಶ್ರೀನಗರ, ಪಂಪೋರ್, ಹಮ್ರೆ, ಪಠಾಣ್, ಮಜೂಮ್, ಪ್ರಸ್ತುತ ಬಾರಾಮುಲ್ಲಾ, ಬಡ್ಗಾಂ, ಕಾಕಾಪೋರಾ, ಅವಂತಿಪುರ, ಬಿಜ್‌ಬೆಹರಾ, ಅನಂತನಾಗ್, ಪಂಜ್‌ಗಮ್, ಸದುರಾ, ಖಾಜಿಗುಂಡ್ , ಬನಿಹಾಲ್ ನಿಲ್ದಾಣಗಳಲ್ಲಿ ರೈಲ್‌ವೈರ್ ವೈಫೈ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.
ಇಂದು ವಿಶ್ವ ವೈಫೈ ದಿನವಾಗಿದ್ದು, ಶ್ರೀನಗರ ಸೇರಿದಂತೆ ಕಾಶ್ಮೀರ ಕಣಿವೆಯ ಎಲ್ಲಾ ರೈಲು ನಿಲ್ದಾಣಗಳು ವಿಶ್ವದ ಅತಿ ದೊಡ್ಡ ಸಮಗ್ರ ಸಾರ್ವಜನಿಕ ವೈಫೈ ನೆಟ್‌ವರ್ಕ್‌ನ ಭಾಗವಾಗಿ ಮಾರ್ಪಟ್ಟಿವೆ. ಭಾರತದ 6,000ಕ್ಕೂ ಹೆಚ್ಚು ರೈಲು ನಿಲ್ದಾಣಗಳೊಂದಿಗೆ ಇವುಗಳ ಸಂಪರ್ಕ ಬೆಸೆದಂತಾಗಿವೆ, ಇದು ಜಗತ್ತಿನ ಅತಿದೊಡ್ಡ ಸಂಯೋಜಿತ ವೈಫೈ ಜಾಲಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ’ ಎಂದು ಘೋಷಿಸಲು ಹೆಮ್ಮೆಯಾಗುತ್ತದೆ ಎಂದು ರೈಲ್ವೆ ಸಚಿವ ಪಿಯೂಶ್ ಗೋಯಲ್ ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.