ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು : 42 ಮಂದಿ ಸಾವು
ಯುಎಸ್ : ಕ್ಯಾಲಿಫೋರ್ನಿಯಾದಲ್ಲಿ ಕಾಣಿಸಿಕೊಂಡಿರುವ ಕಾಡ್ಗಿಚ್ಚು ಸಾಕಷ್ಟು ಸಾವು-ನೋವುಗಳಿಗೆ ಕಾರಣವಾಗಿದೆ. ಕಾಡ್ಗಿಚ್ಚಿನಿಂದ ಸುಮಾರು 900ಕ್ಕೂ ಹೆಚ್ಚು ಕಟ್ಟಡಗಳು ನಾಶವಾಗಿವೆ.
ಸಾವಿರಾರು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಈ ಕ್ರಮದಲ್ಲಿ ಕನಿಷ್ಠ 25 ಅಲ್ಜೀರಿಯನ್ ಸೈನಿಕರು ಬೆಂಕಿಯಿಂದ ಸಾವನ್ನಪ್ಪಿದ್ದು, ಬೆಂಕಿಯಿಂದ ನಾಗರಿಕರ ಸಾವಿನ ಸಂಖ್ಯೆ ಕನಿಷ್ಠ 17 ಕ್ಕೆ ಏರಿದೆ.
ಇದರೊಂದಿಗೆ ಈ ವರೆಗೆ 42 ಮಂದಿ ಕಾಡ್ಗಿಚ್ಚಿಗೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇದು ಅಮೆರಿಕದ ಇತಿಹಾಸದಲ್ಲೇ ಅತ್ಯಂತ ಭೀಕರ ಮತ್ತು ವಿನಾಶಕಾರಿ ಕಾಡ್ಗಿಚ್ಚಾಗಿದ್ದು, ರಕ್ಷಣಾ ಕಾರ್ಯಕರ್ತರು ಹಾಗೂ ಸುಮಾರು 6,000 ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಜುಲೈ 14 ರಂದು ಕಾಣಿಸಿಕೊಂಡಿರುವ ಕಾಳ್ಗಿಚ್ಚು ಇನ್ನೂ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಇದರಿಂದಾಗಿ ಗ್ರೀನ್ವಿಲ್ಲೆಯಲ್ಲಿ ಹೆಚ್ಚಿನ ಭಾಗ ಬೆಂಕಿಗಾಹುತಿಯಾಗಿದೆ.
ಸುಮಾರು 762 ಚದರ ಮೈಲಿಗಳಷ್ಟು (1,973 ಚದರ ಕಿಲೋಮೀಟರ್ಗಳಷ್ಟು) ಬೆಂಕಿ ವ್ಯಾಪಿಸಿದೆ ಎಂದು ಕ್ಯಾಲಿಫೆÇೀರ್ನಿಯಾ ಅರಣ್ಯ ಮತ್ತು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.









