ರಾಜ್ಯದಲ್ಲಿ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ ಎಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ನಮ್ಮ ಜೊತೆ ಇನ್ನೊಬ್ಬ ಸಿಂಧೂರ ಲಕ್ಷ್ಮಣ ಇದ್ದಾನೆ. ಅದು ರಮೇಶ್ ಜಾರಕಿಹೊಳಿ. ನಾವು ಎಲ್ಲ ಜಾತಿಯವರು ಹೊಂದಾಣಿಕ ಮಾಡಿಕೊಂಡಿದ್ದೇವೆ. ನಮ್ಮಲ್ಲಿ ಎಲ್ಲ ಜಾತಿಯವರು ಇದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೊಸ ಟೀಮ್ ಕಟ್ಟುತ್ತಿದ್ದೇವೆ. ಈಗ ಈಶ್ವರಪ್ಪ ಅವರಿಗೆ ಅನ್ಯಾಯವಾಗಿರಬಹುದು. ಆದರೆ, ಅವರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಯಾರಪ್ಪ ಅಂದ್ರೆ ಅದು ಈಶ್ವರಪ್ಪ ಮಾತ್ರ. ಯಾರು ಅನ್ಯಾಯ ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಈಶ್ವರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆದುಕೊಂಡು ಹೋಗುತ್ತೇವೆ. ಅವರನ್ನು ಸಿಎಂ ಆಗುವವರೆಗೂ ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.








