ಬಿಸಿಲ ಬೇಗೆಗೆ ತತ್ತರಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾನುವಾರ ಸಂಜೆ ಗುಡುಗು ಮಿಂಚು ಸಹಿತ ಗಾಳಿ ಮಳೆ ಸುರಿದಿದೆ.
ಮಂಗಳೂರು ನಗರದಲ್ಲಿ ಸಾಧಾರಣ ಮಳೆ ಆಗಿದ್ದರೆ, ಗ್ರಾಮಾಂತರ ಪ್ರದೇಶಗಳಲ್ಲಿ ಬಿರುಸಿನ ಮಳೆಯಾಗಿದ್ದು, ಕೆಲವು ಕಡೆ ಗಾಳಿ ಮಳೆಗೆ ಮರಗಳು ಉರುಳಿ ಬಿದ್ದಿವೆ.
ಸುಳ್ಯ, ನೆಲ್ಯಾಡಿ, ಉಪ್ಪಿನಂಗಡಿ, ಗುಂಡ್ಯದಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಬೆಳ್ಳಾರೆಯಲ್ಲಿ ತೆಂಗಿನ ಮರಕ್ಕೆ ಅಪ್ಪಳಿಸಿದ ಸಿಡಿಲಿಗೆ ಮರ ಹೊತ್ತಿ ಉರಿದ ಘಟನೆ ವರದಿಯಾಗಿದೆ. ಕಡಬದ ತಾಲೂಕಿನ ಕುಂತೂರು ಗ್ರಾಮದಲ್ಲಿ ಸಿಡಿಲು ಬಡಿದು ಎಲ್ಲಾಜೆಮೂಲೆ ಬಾಬು ನಾಯ್ಕ್ ಎಂಬುವರ ಮನೆಗೆ ಹಾನಿಯಾಗಿದೆ. ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆ ಬಿರುಕು ಬಿಟ್ಟಿದ್ದು, ವಿದ್ಯುತ್ ಪೂರೈಕೆಯ ಮೀಟರ್ ಸಂಪೂರ್ಣ ಸುಟ್ಟು ಹೋಗಿದೆ. ಇಚಿಲಂಪಾಡಿ ಪ್ರದೇಶದಲ್ಲೂ ಮನೆಗಳಿಗೆ ಹಾನಿಯಾಗಿದ್ದು, ಅತೂರು ಪರಿಸರದಲ್ಲಿ ರಸ್ತೆಗೆ ಬೃಹತ್ ಮರವೊಂದು ಉರುಳಿ ಬಿದ್ದು ಕೆಲಕಾಲ ರಸ್ತೆ ತಡೆ ಉಂಟಾಯಿತು.
ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.
ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ. ಗಣೇಶ ಚತುರ್ಥಿಯನ್ನು ಎಲ್ಲಾ ದೇವರುಗಳ...