ಪ್ರವಾಸಿ ಭಾರತ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ವೆಸ್ಟ್ ಇಂಡೀಸ್ ತಂಡವನ್ನ ಪ್ರಕಟಿಸಲಾಗಿದ್ದು, ವಿಕೆಟ್-ಕೀಪರ್ ಬ್ಯಾಟ್ಸ್ಮನ್ ಶಾಯ್ ಹೋಪ್ ಹಾಗೂ ವೇಗದ ಬೌಲರ್ ಒಶಾನೆ ಥಾಮಸ್ ಅವರುಗಳು ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ.
ರೋವ್ಮನ್ ಪೊವೆಲ್ ಸಾರಥ್ಯದಲ್ಲಿ ವಿಂಡೀಸ್ ತಂಡ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿದ್ದು, ಕೈಲ್ ಮೇಯರ್ಸ್ಗೆ ಉಪ-ನಾಯಕ ಜವಾಬ್ದಾರಿ ನೀಡಲಾಗಿದೆ. ಏಕದಿನ ಕ್ರಿಕೆಟ್ನಲ್ಲಿ ವಿಂಡೀಸ್ ತಂಡದ ನಾಯಕತ್ವದ ಹೊಣೆ ಹೊತ್ತಿದ್ದ ಶಾಯ್ ಹೋಪ್ ಇದೀಗ ಟಿ20ಯಲ್ಲಿ ತಂಡಕ್ಕೆ ಆಸರೆ ಆಗುವ ನಿರೀಕ್ಷೆಯೊಂದಿಗೆ ಟಿ20 ಸರಣಿಗೆ ಆಯ್ಕೆ ಮಾಡಲಾಗಿದ್ದರೆ. ವೇಗಿ ಒಶಾನೆ ಥಾಮಸ್ ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಲು ಸಜ್ಜಾಗಿದ್ದಾರೆ.
ಇವರೊಂದಿಗೆ ಅನುಭವಿ ಆಟಗಾರರಾದ ಜೇಸನ್ ಹೋಲ್ಡರ್, ಶಿಮ್ರಾನ್ ಹೆಟ್ಮಾಯೆರ್ ಹಾಗೂ ನಿಕೋಲಸ್ ಪೂರನ್ ಅವರುಗಳು ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತದಲ್ಲಿ ಇದೇ ವರ್ಷಾಂತ್ಯದಲ್ಲಿ ನಡೆಯುವ ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿರುವ ವೆಸ್ಟ್ ಇಂಡೀಸ್, ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡುವ ಅವಕಾಶ ಪಡೆಯುವ ನಿಟ್ಟಿನಲ್ಲಿ ಸಿದ್ಧತೆ ಆರಂಭಿಸಿದೆ. ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆಗಸ್ಟ್ 3ರಿಂದ 13ರವರೆಗೆ ನಡೆಯಲಿದೆ.
ವೆಸ್ಟ್ ಇಂಡೀಸ್ ತಂಡ: ರೋವ್ಮನ್ ಪೊವೆಲ್(ನಾಯಕ), ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಓಬೆಡ್ ಮೆಕಾಯ್, ನಿಕೋಲಸ್ ಪೂರನ್, ರೊಮಾರಿಯೊ ಶೆಫರ್ಡ್, ಓಶನ್ ಥಾಮಸ್, ಓಶನ್ ಸ್ಮಿತ್ .
ಭಾರತ T20I ತಂಡ: ಇಶಾನ್ ಕಿಶನ್, ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.
WI v IND, Team India, West Indies, Sports Karnataka








