winter legislative session: ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್
ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈ ಬಾರಿ ಡಿಸೆಂಬರ್ 19 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.
ನವೆಂಬರ್ 17ರಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಡಿಸೆಂಬರ್ 19 ರಿಂದ ಡಿಸೆಂಬರ್ 29ರ ವರೆಗೆ ಒಟ್ಟು 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದ್ದು, ವಿಪಕ್ಷಗಳು ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧವಾಗಿದೆ.
ಈ ಬಾರಿಯ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಸರ್ಕಾರದ 40% ಕಮೀಷನ್, ಹಲವು ಇಲಾಖೆಗಳಲ್ಲಿ ನಡೆದ ಭ್ರಷ್ಟಾಚಾರ ಇತ್ಯಾದಿ ಹಲವು ಅಸ್ತ್ರಗಳು ವಿರೋಧ ಪಕ್ಷದ ಬತ್ತಳಿಕೆಯಲ್ಲಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಸಜ್ಜಾಗುತ್ತಿದೆ.
winter legislative session: winter-legislative-session-muhurta-fix-for-winter-legislative-session