Winter season : ಚಳಿಯ ಜೊತೆಯಲ್ಲಿ ಭಾರೀ ಮಳೆ – ಡಿಸೆಂಬರ್ 14ರವರೆಗೂ ಇದೇ ರಗಳೆ
ರಾಜ್ಯದಲ್ಲಿ ಡಿಸೆಂಬರ್ 14ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಇನ್ನೆರಡು ದಿನ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದ್ದು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚಳಿ ಹೆಚ್ಚಿದೆ.
ಬೆಂಗಳೂರು ನಗರದಲ್ಲಿ ಕಳೆದ 12 ವರ್ಷದಲ್ಲೇ ಕನಿಷ್ಠ ತಾಪಮಾನ ದಾಖಲಾಗಿದ್ದು, ಬಿಟ್ಟೂ ಬಿಡದೆ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ನಡುಗುವ ಚಳಿಗೆ ಜನರು ಹೈರಾಣಾಗಿದ್ದಾರೆ. ಮಳೆ, ಚಳಿ ಹಾಗೂ ತಾಪಮಾನ ಇಳಿಕೆಯಿಂದಾಗಿ ಶೀತ ಸಂಬಂಧಿ ಆರೋಗ್ಯ ಸಮಸ್ಯೆಗಳು ಎಲ್ಲೆಡೆ ಸರ್ವೆ ಸಾಮಾನ್ಯವಾಗಿದೆ.
Winter Season : Heavy rains accompanied by cold – till December 14 in the same areas








