Winter Session: ಡಿಸೆಂಬರ್ 7 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದೆ..
ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 7 ರಿಂದ 29 ರವರೆಗೆ ಪ್ರಾರಂಭವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಶುಕ್ರವಾರ ಹೇಳಿದ್ದಾರೆ.
ಟ್ವೀಟ್ರ್ ನಲ್ಲಿ ಬರೆದುಕೊಂಡಿರುವ ಅವರು, “2022 ರ ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 7 ರಿಂದ ಪ್ರಾರಂಭವಾಗುತ್ತದೆ ಮತ್ತು ಡಿಸೆಂಬರ್ 29 ರವರೆಗೆ 23 ದಿನಗಳಲ್ಲಿ 17 ಸಭೆಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರಗಳು ಮತ್ತು ಇತರ ವಿಷಯಗಳ ಬಗ್ಗೆ ರಚನಾತ್ಮಕ ಚರ್ಚೆ ಮತ್ತು ಚರ್ಚೆಗಳನ್ನು ಎದುರು ನೋಡುತ್ತಿರುವುದಾಗಿ ಸಂಸತ್ತಿನ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದಾರೆ.
Winter Session: The winter session of Parliament will begin from December 7.








