WIvsIND | ಪಂತ್ ಓಪನಿಂಗ್.. ಮಿಡಲ್ ಗೆ ರಾಹುಲ್ | ಬ್ಯಾಟಿಂಗ್ ಆರ್ಡರ್ ನಲ್ಲಿ ಬದಲಾವಣೆ wivsind-ajit-agarkar-wants-rishabh-pant-open-innings
ಫೆಬ್ರವರಿ 6 ರಿಂದ ವಿಂಡೀಸ್ ವಿರುದ್ಧ ಆರಂಭವಾಗಲಿರುವ ಏಕದಿನ ಸರಣಿಗೆ ಟೀಂ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕದಲ್ಲಿ ಹಲವಾರು ಬದಲಾವಣೆಗಳ ಅಗತ್ಯವಿದೆ ಎಂದು ಭಾರತದ ಮಾಜಿ ವೇಗದ ಬೌಲರ್ ಅಜಿತ್ ಅಗರ್ಕರ್ ಹೇಳಿದ್ದಾರೆ.
ಉಪನಾಯಕ ಕೆಎಲ್ ರಾಹುಲ್ ಮಿಡಲ್ ಆರ್ಡರ್ ನಲ್ಲಿ ಬ್ಯಾಟ್ ಬೀಸಬೇಕು. ಇದರಿಂದ ಟೀಂ ಇಂಡಿಯಾಗೆ ಹಲವು ವರ್ಷಗಳಿಂದ ಕಾಡುತ್ತಿರುವ ಮಿಡಲ್ ಆರ್ಡರ್ ಸಮಸ್ಯೆ ಬಗೆಹರಿಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾಯಕ ರೋಹಿತ್ ಶರ್ಮಾ ಜೊತೆಗೆ ಯುವ ಆಟಗಾರ ರಿಷಬ್ ಪಂತ್ ಅವರನ್ನು ಕಳಿಸಬೇಕು ಎಂದು ಸಲಹೆ ನೀಡಿದ್ದಾರೆ.
ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ, ಕೆಎಲ್ ರಾಹುಲ್ ಅವರು ನಾಯಕನಾಗಿ ಮಾತ್ರವಲ್ಲದೆ ಆರಂಭಿಕರಾಗಿಯೂ ವೈಫಲ್ಯ ಕಂಡಿದ್ದಾರೆ. ಹೀಗಾಗಿ ಅವರನ್ನು ಮಿಡಲ್ ಆರ್ಡರ್ ಗೆ ಕಳುಹಿಸಿದೇ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ ಎಂದಿದ್ದಾರೆ.
ರಾಹುಲ್ ಅವರನ್ನು 4 ಅಥವಾ 5ನೇ ಸ್ಥಾನಕ್ಕೆ ಕಳುಹಿಸುವ ಮೂಲಕ ಮಿಡಲ್ ಆರ್ಡರ್ ಡೆಪ್ತ್ ಹೆಚ್ಚಾಗಲಿದ್ದು, ಇದು ತಂಡಕ್ಕೆ ಖಂಡಿತವಾಗಿಯೂ ಲಾಭದಾಯಕವಾಗಲಿದೆ.
ಮಿಡಲ್ ಆರ್ಡರ್ ಬ್ಯಾಟರ್ ಆಗಿ ರಾಹುಲ್ ಉತ್ತಮ ದಾಖಲೆ ಹೊಂದಿದ್ದಾರೆ. ರಾಹುಲ್ 12 ಇನ್ನಿಂಗ್ಸ್‌ಗಳಲ್ಲಿ 2 ಶತಕ ಮತ್ತು 4 ಅರ್ಧಶತಕಗಳೊಂದಿಗೆ 613 ರನ್ ಗಳಿಸಿದ್ದಾರೆ.
2023ರ ಏಕದಿನ ವಿಶ್ವಕಪ್ ದೃಷ್ಠಿಯಿಂದ ತಂಡದಲ್ಲಿ ಈ ಬದಲಾವಣೆ ಮಾಡಿದರೇ ಸೂಕ್ತ ಎಂದು ಅಗಾರ್ಕರ್ ಅಭಿಪ್ರಾಯಪಟ್ಟಿದ್ದಾರೆ.









