WIvsIND ODI | ವೆಸ್ಟ್ ಇಂಡೀಸ್ ತಂಡಕ್ಕೆ ಆರಂಭಿಕ ಆಘಾತ wivsind-odi- west indies lost first wicket saaksha tv
ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲರ್ ಮೊಹ್ಮದ್ ಸಿರಾಜ್ ವೆಸ್ಟ್ ಇಂಡೀಸ್ ತಂಡಕ್ಕೆ ಆರಂಭಿಕ ಆಘಾತ ನೀಡಿದ್ದಾರೆ. 8 ರನ್ ಗಳಿಸಿದ್ದ ಶಾಯ್ ಹೋಪೆ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ್ದಾರೆ.
ಇನ್ನು ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು, ಬೌಲಿಂಗ್ ಆಯ್ದುಕೊಂಡಿದ್ದಾರೆ. ನಾಯಕನ ನಿರ್ಣಯ ಸಮರ್ಥಿಸಿಕೊಳ್ಳುವಂತೆ ವೇಗಿಗಳಾದ ಮೊಹ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಬೌಲಿಂಗ್ ಮಾಡುತ್ತಿದ್ದಾರೆ. ವೆಸ್ಟ್ ಇಂಡೀಸ್ ಇನ್ನಿಂಗ್ಸ್ ನ 2.4 ನೇ ಓವರ್ ನಲ್ಲಿ ಸಿರಾಜ್ ಟೀಂ ಇಂಡಿಯಾಗೆ ಬ್ರೇಕ್ ತಂದುಕೊಟ್ಟಿದ್ದಾರೆ.
ಅಂದಹಾಗೆ ಈ ಪಂದ್ಯದಲ್ಲಿ ಭಾರತದ ಪರ ರೋಹಿತ್ ಶರ್ಮಾ ಜೊತೆ ಯುವ ಬ್ಯಾಟರ್ ಇಶಾನ್ ಕಿಶಾನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಆಲ್ ರೌಂಡರ್ ದೀಪಕ್ ಹೂಡ ಈ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದಾರೆ.
ತಂಡಗಳು ಹೀಗಿವೆ :
ಭಾರತ ತಂಡ : ರೋಹಿತ್ ಶರ್ಮಾ, ಇಶಾನ್ ಕಿಶಾನ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸೂರ್ಯ ಕುಮಾರ್ ಯಾದವ್, ದೀಪಕ್ ಹೂಡಾ, ವಾಷಿಂಗ್ ಟನ್ ಸುಂದರ್, ಶರ್ದೂಲ್ ಠಾಕೂರ್, ಯಜುವೇಂದ್ರ ಚಹಾಲ್, ಪ್ರಸಿದ್ಧ್ ಕೃಷ್ಣ, ಮೊಹ್ಮದ್ ಸಿರಾಜ್
ವೆಸ್ಟ್ ಇಂಡೀಸ್ : ಬ್ರಾಂಡನ್ ಕಿಂಗ್, ಶಾಯ್ ಹೋಪ್(w), ಶಮರ್ಹ್ ಬ್ರೂಕ್ಸ್, ಡ್ಯಾರೆನ್ ಬ್ರಾವೋ, ನಿಕೋಲಸ್ ಪೂರನ್, ಕೀರಾನ್ ಪೊಲಾರ್ಡ್(ಸಿ), ಜೇಸನ್ ಹೋಲ್ಡರ್, ಫ್ಯಾಬಿಯನ್ ಅಲೆನ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಅಕೇಲ್ ಹೊಸೈನ್