ಚಿಕ್ಕಮಗಳೂರು: ವೈದ್ಯರು(Doctor) ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ್ದ ಮಹಿಳೆ (Woman) ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು,
ಮೂಳೆ ತಜ್ಞ ವೆಂಕಟೇಶ್ ಮೇಲೆ ಮಹಿಳೆ ಏಕಾಏಕಿ ಹಲ್ಲೆ ನಡೆಸಿದ್ದು, ಶರ್ಟ್, ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಿ ಹಲ್ಲೆ ನಡೆಸಿದ್ದಾರೆ.
ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿ ಹಿನ್ನೆಲೆಯಲ್ಲಿ ಯುವಕನೊಬ್ಬ ಆಸ್ಪತ್ರೆಗೆ ಬಂದಿದ್ದಾನೆ. ಚಿಕಿತ್ಸೆ ನೀಡುವ ಸಮಯದಲ್ಲಿ ಮಹಿಳೆ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾಳೆ. ರೋಗಿಯ ಅಕ್ಕನಿಗೆ ವೈದ್ಯರು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆಂದು ಆರೋಪಿಸಿ ಮಹಿಳೆ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾಳೆ ಎನ್ನಲಾಗಿದೆ.
ಘಟನೆಯ ನಂತರ ರಕ್ಷಣೆ ನೀಡುವಂತೆ ಆಗ್ರಹಿಸಿ ಆಸ್ಪತ್ರೆ ಸಿಬ್ಬಂದಿ ಒಪಿಡಿ ಸೇವೆ ಬಂದ್ ಮಾಡಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದೆ. ನ್ಯಾಯ ಕೊಡಿಸುವಂತೆ ಆಸ್ಪತ್ರೆ ಸಿಬ್ಬಂದಿ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.