ಯಾದಗಿರಿ: ಜಗಳದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಸೀರೆ ಹಿಡಿದು ಎಳೆದಾಡಿದ್ದಾನೆಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮನೆಯ ಹತ್ತಿರ ನೀರು ಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಕಪಕ್ಕದ ಮನೆಯವರ ಮಧ್ಯೆ ಜಗಳ ನಡೆದಿದೆ. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಸೀರೆ ಹಿಡಿದೆ ಎಳೆದಾಡಿದ್ದಕ್ಕೆ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ವಿಜಯಲಕ್ಷ್ಮೀ(30) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದವರನ್ನು ಕೂಡಲೇ ಬಂಧಿಸಬೇಕು ಎಂದು ಕುಟುಂಬಸ್ಥರು ಜಿಲ್ಲೆಯ ಸುರಪುರ ತಾಲೂಕಿನ ಹುಣಸಗಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಇಂದ್ರಮ್ಮ, ಹನುಮಂತರಾಯ, ಪುಷ್ಪಾ, ಶಶಿಕಲಾರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.