ಕಲಬುರಗಿ: ಮೆಡಿಕಲ್ ಸಿಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ.
ಈ ಘಟನ ಜಿಲ್ಲೆಯ ಅಫಜಲಪೂರ ತಾಲೂಕಿನ ದುದ್ದಣಗಿ ಗ್ರಾಮದಲ್ಲಿ ನಡೆದಿದೆ. ದುದ್ದಣಗಿ ಗ್ರಾಮದ ಶ್ವೇತಾ ಅಪ್ಪಾಸಾಬ ಗುಣಾರಿ (20) ಆತ್ಮಹತ್ಯೆ ಮಡಿಕೊಂಡಿರುವ ದುರ್ದೈವಿ ಎನ್ನಲಾಗಿದೆ.
ವಿದ್ಯಾರ್ಥಿನಿಯು ಮೆಡಿಕಲ್ ಮಾಡಬೇಕೆಂಬ ಕನಸು ಕಂಡು ಸಾಕಷ್ಟು ಅಧ್ಯಯನ ನಡೆಸಿದ್ದಳು. ಇದಕ್ಕಾಗಿ ನೀಟ್ ಪರೀಕ್ಷೆಯನ್ನು ಬರೆದಿದ್ದಳು. ಮೆಡಿಕಲ್ ಸೀಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿಯೂ ಇದ್ದಳು. ಆದರೆ, ಸೀಟ್ ಸಿಗದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅಫಜಲಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








