ಲಾರಿ ಹರಿದು ಮಹಿಳೆ ಸಾವು Saaksha Tv
ಬೆಂಗಳೂರು: ಮಹಿಳೆ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿ ಮುಖ್ಯ ರಸ್ತೆಯ ಬ್ಯಾಡರಹಳ್ಳಿಯಲ್ಲಿ ನಡೆದಿದೆ.
ನಗರದಲ್ಲಿ ರಸ್ತೆಗಳಲ್ಲಿನ ಗುಂಡಿಗಳಿಗೆ ಸಾಕಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಂಹದೆ ಘಟನೆ ಈಗ ಮತ್ತೆ ಮರುಕಳಿಸಿದೆ. ನಗರದಲ್ಲಿ ಇಂದು ಗುಂಡಿ ತಪ್ಪಿಸಲು ಹೋಗಿ ಮಹಿಳೆ ಆಯತಪ್ಪಿ ಬಿದ್ದಿದ್ದಾರೆ. ಆಯತಪ್ಪಿ ಬಿದ್ದ ಮಹಿಳೆ ಮೇಲೆ ಏಳಲು ಪರದಾಡುತ್ತಿದ್ದರು. ಈ ವೇಳೆ ಜೋರಾಗಿ ಬಂದ ಲಾರಿ ಮಹಿಳೆ ಮೇಲೆ ಹರಿದಿದೆ. ಲಾರಿ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. 38 ವರ್ಷದ ಶರ್ಮಿಳಾ ಮೃತ ದುರ್ದೈವಿ ಎಂದು ತಿಳಿದು ಬಂದಿದೆ
ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಆರೋಪಿ ಲಾರಿ ಚಾಲಕ ಮಾದೇಶ ಎಂದು ತಿಳಿದು ಬಂದಿದೆ. ಸಧ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.