ಗಂಡನನ್ನು ಹೆಗಲ ಮೇಲೆ ಹೊತ್ತು ತಿರುಗುವಂತೆ ಮಹಿಳೆಗೆ ಬಲವಂತದ ಶಿಕ್ಷೆ
ಭೋಪಾಲ್, ಜುಲೈ 31: ಮಧ್ಯಪ್ರದೇಶದ ಜಾಬುವಾದಲ್ಲಿ ರಾನ್ವಾಸ್ ಗ್ರಾಮದ ಮಹಿಳೆಯೊಬ್ಬರಿಗೆ ಕೋಲುಗಳಿಂದ ಹೊಡೆದು ಗಂಡನನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುವ ಶಿಕ್ಷೆ ವಿಧಿಸಿದ ವಿಲಕ್ಷಣ ಘಟನೆಯೊಂದು ನಡೆದಿದೆ.
ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಮಹಿಳೆಯೊಬ್ಬಳು ತನ್ನ ಗಂಡನನ್ನು ಹೆಗಲ ಮೇಲೆ ಹೊತ್ತುಕೊಂಡು ಹಳ್ಳಿಯ ಸುತ್ತಲೂ ಓಡಾಡುತ್ತಿರುವುದು ಕಂಡುಬರುತ್ತದೆ.
ಮಹಿಳೆಯ ಪತಿ ತನ್ನ ಪತ್ನಿಗೆ ಇನ್ನೊಬ್ಬ ಪುರುಷನೊಂದಿಗೆ ವಿವಾಹೇತರ ಸಂಬಂಧವಿದೆ ಎಂದು ಆರೋಪಿಸಿ ಪಂಚಾಯತಿ ಕರೆದಿದ್ದು, ಅಲ್ಲಿ ಮಹಿಳೆ ತನ್ನ ಗಂಡನನ್ನು ಹೆಗಲ ಮೇಲೆ ಹೊತ್ತುಕೊಂಡು ಹಳ್ಳಿಯ ಸುತ್ತಲೂ ಓಡಾಡಬೇಕು ಎಂದು ನಿರ್ಧರಿಸಲಾಯಿತು.
ಮಹಿಳೆಯ ದೂರಿನ ಮೇರೆಗೆ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಅದು ಸಂಪೂರ್ಣವಾದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.ಇಲ್ಲಿಯವರೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿಲ್ಲ. ಕಳೆದ ಒಂದು ತಿಂಗಳಲ್ಲಿ ಜಾಬುವಾದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ.