ಲಕ್ನೋ : ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಸಂತ್ರಸ್ತೆಯನ್ನ ರಸ್ತೆಯಲ್ಲಿ ಎಸೆದು ಕಾಮುಕರು ಪರಾರಿ ಆಗಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.
ಅರೆಪ್ರಜ್ಞೆ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದಾರೆ.
ದೇಶದಲ್ಲಿ 24 ಗಂಟೇಲಿ 88,600 ಮಂದಿಗೆ ಕೊರೊನಾ ದೃಢ
ಮಹಿಳೆಗೆ ತಂಪು ಪಾನೀಯದಲ್ಲಿ ನಶೆಯ ಪದಾರ್ಥ ಸೇರಿಸಿ ಕುಡಿಸಿ ಅತ್ಯಾಚಾರ ಎಸಗಲಾಗಿದೆ.
ನಂತರ ಕಾಮುಕರು ಸಂತ್ರಸ್ತೆಯನ್ನು ನಡುರಸ್ತೆಯಲ್ಲಿ ಎಸೆದು ಪರಾರಿಯಾಗಿದ್ದಾರೆ.
ಮಹಿಳೆ ಮಾತನಾಡುವ ಸ್ಥಿತಿಯಲ್ಲಿಲ್ಲ. ಹಾಗಾಗಿ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಮಹಿಳೆಯ ಕುಟುಂಬಸ್ಥರನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.








