ಬೆಂಗಳೂರಲ್ಲಿ ಯುವತಿಯ ಅಂಗಾಂಗ ಮುಟ್ಟಿ ಹಲ್ಲೆ

1 min read

ಬೆಂಗಳೂರಲ್ಲಿ ಯುವತಿಯ ಅಂಗಾಂಗ ಮುಟ್ಟಿ ಹಲ್ಲೆ

ಬೆಂಗಳೂರು : ಹಾಡಹಗಲೇ ಕಾಮುಕನೋರ್ವ ಯುವತಿಯ ಅಂಗಾಂಗ ಮುಟ್ಟಿ ಹಲ್ಲೆ ನಡೆಸಿರುವ ಘಟನೆ ನಗರದ ಲ್ಯಾಂಗ್ ಪೋರ್ಡ್ ರಸ್ತೆಯಲ್ಲಿ ನಡೆದಿದೆ.

ಈ ಸಂಬಂಧ ಯುವತಿ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಂತ್ರಸ್ತೆ ಯುವತಿ ಜಯನಗರದ ಸೌತ್ ಎಂಡ್ ಸರ್ಕಲ್ ನಲ್ಲಿರುವ ಬ್ಯಾಂಕಿನಲ್ಲಿ ಬಿಪಿಓ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Banglore police saaksha tv

ಎಂದಿನಂತೆ ಸೆ.12 ಭಾನುವಾರ ಬೆಳಿಗ್ಗೆ ಕರ್ತವ್ಯಕ್ಕೆ ಲ್ಯಾಂಡ್ ಪೋರ್ಡ್ ರಸ್ತೆಯ ಕಡೆ ತೆರಳುತ್ತಿದ್ದ ವೇಳೆಯಲ್ಲಿ ಅಪರಿಚಿತ ವ್ಯಕ್ತಿಯೊರ್ವ ಹಿಂಭಾಗದಿಂದ ತಬ್ಬಿಕೊಂಡು ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಯುವತಿ ಆರೋಪಿಸಿದ್ದಾರೆ.

ಈ ವೇಳೆ ಅಲ್ಲಿದ್ದ ಸ್ಥಳೀಯರು ಯುವತಿಯ ನೆರವಿಗೆ ಧಾವಿಸಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd