ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪತಿಯನ್ನು ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಪತ್ನಿಗೆ ಆಂಬುಲೆನ್ಸ್ ನಲ್ಲಿ ಚಾಲಕ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದಲ್ಲಿ ಈ ಘಟನೆ ಲಕ್ನೋದ ಗಾಜಿಪುರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅಲ್ಲದೇ, ಆರೋಪಿಯು, ಪತಿಯ ಆಕ್ಸಿಜನ್ ಸಂಪರ್ಕವನ್ನು ಕಡಿತಗೊಳಿಸಿದ್ದಾನೆ. ಹೀಗಾಗಿ ಪತಿ ಸಾವನ್ನಪ್ಪಿದ್ದಾನೆ. ಆನಂತರ ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿ ಇದ್ದ ಹಣ ದೋಚಿದ್ದಾನೆ ಎನ್ನಲಾಗಿದೆ.
ಆಕೆಯ ಪತಿ ಲಕ್ನೋದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸಾ ವೆಚ್ಚವನ್ನು ಭರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪತ್ನಿ ಮನೆಗೆ ಕರೆದುಕೊಂಡು ಹೋಗಲು ನಿರ್ಧರಿಸಿದ್ದರು. ಹೀಗಾಗಿ ಖಾಸಗಿ ಆಂಬುಲೆನ್ಸ್ ಬುಕ್ ಮಾಡಿದ್ದರು. ಆಸ್ಪತ್ರೆಯಲ್ಲಿ ಕೇವಲ 2 ದಿನಗಳ ಚಿಕಿತ್ಸೆಗೆ 1 ಲಕ್ಷಕ್ಕೂ ಹೆಚ್ಚು ಶುಲ್ಕ ಕಟ್ಟಿಸಿಕೊಳ್ಳಲಾಗಿತ್ತು.
ಆಂಬ್ಯುಲೆನ್ಸ್ ನ ಚಾಲಕ ಆಸ್ಪತ್ರೆಯಿಂದ 150 ಕಿ.ಮೀ ದೂರು ಹೋಗಿ ಅಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲಿ ತಪ್ಪಿಸಿಕೊಂಡ ಮಹಿಳೆ ಪೊಲೀಸರಿಗೆ ಕರೆ ಮಾಡಿದ್ದಾರೆ. ಕೂಡಲೇ ಪೊಲೀಸರು ಬೇರೆ ಆಂಬುಲೆನ್ಸ್ ಕಳುಹಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಪತಿ ಸಾವನ್ನಪ್ಪಿದ್ದಾರೆ. ಈ ಕುರಿತು ಚಾಲಕನ ವಿರುದ್ಧ ಗಾಜಿಪುರ ಪೊಲೀಸ್ ಠಾಣೆಯಲ್ಲಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.