ಬೆಳಗಾವಿ: ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿದ್ದ ಮಹಿಳೆಗೆ ಸರ್ಕಾರವು 2.03 ಎಕರೆ ಜಮೀನು ಮಂಜೂರು ಮಾಡಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ ವಂಟಮುರಿ (Hosavantamuri Woman) ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಸದ್ಯ ಈ ಮಹಿಳೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಜಮೀನು ಮಂಜೂರು ಮಾಡಲಾಗಿದೆ.
2.03 ಎಕರೆ ಜಮೀನು ಮಂಜೂರಾತಿಯೊಂದಿಗೆ ಸರ್ಕಾರವು ಈಗಾಗಲೇ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.