ಮೈಸೂರು: ಬಾಳೆ ಗಿಡಕ್ಕೆ ಮಹಿಳೆಯ ಶವವೊಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ತೋಟದ ಮಾಲೀಕನೇ ಅತ್ಯಾಚಾರ ನಡೆಸಿ ನೇಣು ಹಾಕಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಜಿಲ್ಲೆಯ ನಂಜನಗೂಡು (Nanjangud) ತಾಲೂಕಿನ ಗಟ್ಟವಾಡಿ ಗ್ರಾಮದ ಬಾಳೆ ತೋಟವೊಂದರಲ್ಲಿ ಈ ಘಟನೆ ನಡೆದಿದೆ.
ಗಟ್ಟವಾಡಿ ಗ್ರಾಮದ ಶಶಿಕಲಾ (38) ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿರುವ ಮಹಿಳೆ ಎನ್ನಲಾಗಿದೆ. ಗ್ರಾಮದ ನಂಜುಂಡಪ್ಪ ಅಲಿಯಾಸ್ ಸಿದ್ದಲಿಂಗಪ್ಪ ಎಂಬ ವ್ಯಕ್ತಿಯ ಬಾಳೆ ತೋಟದಲ್ಲಿ ಶವ ಪತ್ತೆಯಾಗಿದೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬಾಳೆ ತೋಟದ ಮಾಲೀಕ ನಂಜುಂಡಪ್ಪ ಗ್ರಾಮದಿಂದ ನಾಪತ್ತೆಯಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ನಂಜನಗೂಡಿನ ಡಿವೈಎಸ್ಪಿ ರಘು ಪಿಎಸ್ಐ ಲಕ್ಷ್ಮಿಕಾಂತ ಕೋಳಿ, ಚೇತನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








