ಚಿಕ್ಕಬಳ್ಳಾಪುರ: ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ಫ್ಯಾಮಿಲಿ ಪ್ಲಾನಿಂಗ್ ಆಪರೇಷನ್ ವೇಳೆ ಆದ ಯಡವಟ್ಟಿನಿಂದ ಮಹಿಳೆ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಸಾಮಾನ್ಯ ಆಪರೇಷನ್ ವೇಳೆ ಮಹಿಳೆ ಸಾವನ್ನಪ್ಪಿರುವುದು ಹೇಗೆ. ಈ ಬಗ್ಗೆ ತನಿಖೆ ನಡೆಸಲು ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಆದೇಶ ನೀಡಿದ್ದಾರೆ.
30 ವರ್ಷದ ಮಹಿಳೆ ಸಾವನ್ನಪ್ಪಿರುವುದು ದುರದೃಷ್ಟಕರ ಸಂಗತಿ. ಯಾವ ಕಾರಣಕ್ಕೆ ಸಾವಾಗಿದೆ ಎಂಬುದು ತನಿಖೆಯಿಂದಷ್ಟೆ ಹೊರ ಬರಬೇಕು. ಆಪರೇಷನ್ ವೇಳೆ ವೈದ್ಯರ ನಿರ್ಲಕ್ಷ್ಯ ಕಂಡು ಬಂದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ತಿಳಿಸಿದ್ದಾರೆ.
ಪೋಸ್ಟ್ ಮಾರ್ಟಂ ವರದಿ ಬರುವ ತನಕ ಯಾರ ಮೇಲೂ ಆರೋಪ ಮಾಡಲು ಆಗಲ್ಲ. ಇಂತಹ ಪ್ರಕರಣಗಳಲ್ಲಿ ಅನಸ್ತೇಶಿಯಾ ಪ್ರಮಾಣ ಅಧಿಕವಾದಾಗ ಸಾವು ಸಂಭವಿಸುವ ಸಾಧ್ಯತೆ ಹೆಚ್ಚು. ಇದರಲ್ಲಿ ಲೋಪವಾಗಿದೆಯೇ ಎಂಬುದು ತನಿಖೆಯಿಂದಷ್ಟೇ ದೃಢವಾಗಬೇಕು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸರ್ಜನ್ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಆದರೆ, ವೈದ್ಯಕೀಯ ನಿರ್ಲಕ್ಷ್ಯದ ವಿರುದ್ಧ ಎಫ್‍ಐಆರ್ ದಾಖಲಿಸುವಂತಿಲ್ಲ. ಈ ಪ್ರಕರಣದಲ್ಲಿ ತನಿಖೆ ನಂತರ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಸುಧಾಕರ್ ಹೇಳಿದ್ದಾರೆ.
ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು
ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...








