ಲಕ್ನೋ: ರಾಮ ಮಂದಿರ ಉದ್ಘಾಟನೆಯ ದಿನವಾಗಿರುವ ಜ. 22ರಂದೇ ಹೆರಿಗೆ ಮಾಡಿಸಿಕೊಳ್ಳುವಂತೆ ಗರ್ಭಿಣಿಯರು ವೈದ್ಯರಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ (ಜನವರಿ 22) ಸಿಸೇರಿಯನ್ ಹೆರಿಗೆ ಮಾಡುವಂತೆ ಹಲವಾರು ಗರ್ಭಿಣಿಯರು ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಗಣೇಶ್ ಶಂಕರ್ ವಿದ್ಯಾರ್ಥಿ ಮೆಮೋರಿಯಲ್ ಮೆಡಿಕಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೀಮಾ ದ್ವಿವೇದಿ ಈ ಕುರಿತು ಮಾತನಾಡಿ, 12 ರಿಂದ 14 ಗರ್ಭಿಣಿಯರು ಸಿಸೇರಿಯನ್ ಹೆರಿಗೆಗೆ ಲಿಖಿತ ಮನವಿ ಸಲ್ಲಿಸಿದ್ದಾರೆ. ಕೋರಿಕೆಯ ಹಿನ್ನೆಲೆಯಲ್ಲಿ ಜ. 22ರಂದು 35 ಸಿಸೇರಿಯನ್ ಆಪರೇಷನ್ ಗಳಿಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಹೆರಿಗೆ ದಿನಾಂಕ ಬೇರೆ ಬೇರೆ ಇದ್ದರೂ ಬಹುಪಾಲು ಗರ್ಭಿಣಿಯರು ಜ.22 ರಂದೇ ಹೆರಿಗೆ ಆಗಬೇಕು ಎಂದು ಮನವಿ ಮಾಡಿದ್ದಾರೆ. ಆರೋಗ್ಯ ಗಮನದಲ್ಲಿ ಇಟ್ಟುಕೊಂಡು ಕೆಲವರ ಮನವಿಗೆ ಒಪ್ಪಲಾಗಿದೆ ಎಂದು ಹೇಳಿದ್ದಾರೆ.








