ಇನ್ಸ್ಟಾಗ್ರಾಮ್ ನಲ್ಲಿ ನಿರಂತರ ವಿಡಿಯೋ ಪೋಸ್ಟ್ – ಯುವತಿಗೆ ಬೆಂಕಿ ಇಟ್ಟ ಪ್ರಿಯಕರ
ಕೇರಳ : ಇನ್ಸ್ಟಾಗ್ರಾಮ್ ನಲ್ಲಿ ನಿರಂತರ ವಿಡಿಯೋ ಪೋಸ್ಟ್ ಮಾಡುತ್ತಿದ್ದ ವಿಚಾರವಾಗಿ ಲಿವಿಂಗ್ ಟುಗೆದರ್ ರಿಲೇಷನ್ ಶಿಪ್ ನಲ್ಲಿದ್ದ ಇಬ್ಬರ ನಡುವೆ ಜಗಳ ಆರಂಭವಾಗಿ ಕೊಲೆಯಲ್ಲಿ ಅಂತ್ಯ ಕಂಡಿದೆ. ಕೊಲ್ಲಂನ ಎಡಾಮುಲಕಲ್ ನಲ್ಲಿ ಈ ಘಟನೆ ನಡೆದಿದೆ. ಇನ್ಸ್ಟಾಗ್ರಾಮ್ ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಫೋಸ್ಟ್ ಮಾಡಿದ್ದಕ್ಕೆ ಉಂಟಾದ ಜಗಳದಿಂದ (28 ) ಯುವತಿಗೆ ಆಕೆಯ ಪ್ರಿಯಕರ ಬೆಂಕಿ ಹಚ್ಚಿದ್ದಾನೆ. ಮೃತ ಯುವತಿಯನ್ನು ಆತಿರಾ ಎಂದು ಗುರುತಿಸಲಾಗಿದೆ.
ಸುಟ್ಟ ಗಾಯಗಳಿಂದಾಗಿ ಈಕೆಗೆ ತಿರುವನಂತಪುರಂ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇದೀಗ ಮೃತಪಟ್ಟಿದ್ದಾಳೆ. ಶಾನವಾಸ್ ಎಂಬಾತ ಯುವತಿಗೆ ಬೆಂಕಿ ಹಚ್ಚಿದ್ದಾನೆ. ಅಲ್ಲದೇ ಆತಿರಾಗೆ ಬೆಂಕಿ ಹಚ್ಚಿದ ನಂತರ ಶಾನವಾಸ್ ಕೂಡಾ ಬೆಂಕಿ ಹಚ್ಚಿಕೊಂಡಿದ್ದು, ಶೇ.40 ರಷ್ಟು ಸುಟ್ಟಗಾಯಗಳಿಂದಾಗಿ ತಿರುವನಂತಪುರಂ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ. ಇವರಿಬ್ಬರು ಕಳೆದ 2 ವರ್ಷಗಳಿಂದ ಲಿವಿಂಗ್ ಟುಗೆದರ್ ನಲ್ಲಿದ್ದು, ಇವರಿಗೆ 6 ತಿಂಗಳ ಮಗು ಇದೆ ಎಂದು ಸಹ ತಿಳಿದುಬಂದಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.