ಬೆಂಗಳೂರು : ಮಹಿಳೆಯರು ಬಸ್ ನಲ್ಲಿಯೇ ಚಪ್ಪಲಿಯಿಂದ ಹೊಡೆದಾಡಿಕೊಂಡ ಘಟನೆ ನಡೆದಿದೆ.
ಸಿಲಿಕಾನ್ ಸಿಟಿಯಲ್ಲಿ ಈ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಮೆಜೆಸ್ಟಿಕ್ ನಿಂದ ಪೀಣ್ಯಕ್ಕೆ ಹೊರಟಿದ್ದ ಸಂದರ್ಭದಲ್ಲಿ ಕಿಟಕಿ ವಿಷಯವಾಗಿ ಇಬ್ಬರು ಮಹಿಳೆಯರ ಮಧ್ಯೆ ಜಗಳ ಆರಂಭವಾಗಿದೆ. ಕಿಟಕಿ ವಿಷಯಕ್ಕೆ ಮುಂದಿನ ಸೀಟ್ ನಲ್ಲಿ ಕುಳಿತಿದ್ದ ಮಹಿಳೆ ಹಾಗೂ ಹಿಂದಿನ ಸೀಟ್ ನಲ್ಲಿ ಕುಳಿತಿದ್ದ ಮಹಿಳೆಯ ಮಧ್ಯೆಯೇ ಆರಂಭವಾಗಿದೆ. ಜಗಳ ತಾರಕಕ್ಕೇರಿ ಮುಂದೆ ಕುಳಿತಿದ್ದ ಮಹಿಳೆಯು ಏಕಾಏಕಿಯಾಗಿ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾಳೆ. ನಂತರ ಇಬ್ಬರೂ ಪರಸ್ಪರ ಬಡಿದಾಡಿಕೊಂಡಿದ್ದಾರೆ.
ಬಸ್ ನಲ್ಲಿದ್ದ ಜನರು ಮುಂದಿನ ಸೀಟ್ ನಲ್ಲಿ ಮಹಿಳೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಹ ಪ್ರಯಾಣಿಕರು ವಿಡಿಯೋ ವಿಡಿಯೋ ಮಾಡಿದ್ದು, ವೈರಲ್ ಆಗಿದೆ.