ಲಕ್ನೋ: 6 ಜನ ವಿದ್ಯಾರ್ಥಿಗಳನ್ನು ಐಸಿಸ್ (ISIS) ಪರ ಕೆಲಸ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ (Aligarh Muslim University) 6 ಜನ ವಿದ್ಯಾರ್ಥಿಗಳನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳದ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈ ಮೂಲಕ ಅಲಿಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಭಯೋತ್ಪಾದಕ ಜಾಲ ಬೆಳಕಿಗೆ ಬಂದಿದೆ. ಎಲ್ಲ ಬಂಧಿತ ಆರೋಪಿಗಳು ಅಲಿಗಢ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆಯೊಂದಿಗೆ (Student Union) ಸಂಬಂಧ ಹೊಂದಿದ್ದರು ಎನ್ನಲಾಗಿದೆ.
ಭಯೋತ್ಪಾದನಾ ನಿಗ್ರಹ ದಳದ ಪ್ರಕಾರ ಬಂಧಿತ ಆರೋಪಿಗಳು ದೇಶದಲ್ಲಿ ದೊಡ್ಡ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಹಲವು ವಿದ್ಯಾರ್ಥಿಗಳು ದೇಶ ವಿರೋಧಿ ಅಜೆಂಡಾ ಹರಡಲು ತೊಡಗಿರುವ ವಿಚಾರ ಗೊತ್ತಾದ ಹಿನ್ನೆಲೆಯಲ್ಲಿ ಇಬ್ಬರ ವಿಚಾರಣೆಯ ನಂತರ ಉತ್ತರ ಪ್ರದೇಶ ಎಟಿಎಸ್ ಆರು ಜನ ವಿದ್ಯಾರ್ಥಿಗಳನ್ನು ಬಂಧಿಸಿದೆ.