ಕೊರೋನಾ ಸೋಂಕಿನ ಕಾರಣದಿಂದ ಎಲ್ಲೆಡೆಯೂ ಮನೆಯಿಂದಲೇ ಕೆಲಸ ಮಾಡುವಂತಾಗಿದೆ. ಕೊರೋನಾ ಸೋಂಕು ಭಾರತದಲ್ಲಿ ಹರಡಲು ಪ್ರಾರಂಭಿಸುತ್ತಿದ್ದಂತೆ, ಐಟಿ ಕಂಪೆನಿಗಳು ತನ್ನ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಮಾಡಲು ಸೂಚಿಸಿದವು. ದೇಶದಲ್ಲಿ 43 ಲಕ್ಷ ಐಟಿ ಕಂಪೆನಿಗಳ ಉದ್ಯೋಗಿಗಳಲ್ಲಿ ಇಂದು ಬಹುತೇಕರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಇದರಿಂದಾಗಿ ಟೆಕ್ ಪಾರ್ಕ್ ಗಳನ್ನು ಅವಲಂಬಿಸಿದ್ದ 14.37 ಲಕ್ಷ ಕೋ. ರೂ. ಮೌಲ್ಯದ ಐಟಿ ವಲಯದ ಕಾರ್ಯ ವೈಖರಿ ಬದಲಾಗಿದೆ. ಜೊತೆಗೆ ವೆಚ್ಚದ ವಿಧಾನವೂ ಮೊದಲಿನಂತಿಲ್ಲ. ಹೀಗಾಗಿ ಐಟಿ ಕ್ಷೇತ್ರದ ನಾಯಕರು ಹೊಸ ಪರಿಸ್ಥಿತಿಗೆ ಅನುಗುಣವಾಗಿ ತೆರಿಗೆ ಮತ್ತು ಕಾರ್ಮಿಕರ ಕಾನೂನುಗಳಲ್ಲಿ ಬದಲಾವಣೆಗಳನ್ನು ಮಾಡುವಂತೆ ಸರಕಾರಕ್ಕೆ ಮನವಿ ಮಾಡಿದ್ದಾರೆ.
ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಐಟಿ ನಾಯಕರು ತಿಂಗಳ ಪ್ರಾರಂಭದಲ್ಲಿ ಈ ಸಂಬಂಧ ಮಾತುಕತೆ ನಡೆಸಿದ್ದು, ಭವಿಷ್ಯದಲ್ಲಿ ಶೇಕಡಾ 50 ಐಟಿ ಉದ್ಯೋಗಿಗಳು ಮನೆಯಿಂದ ಕೆಲಸ ಮಾಡುವ ಪದ್ಧತಿಯನ್ನು ಅನುಸರಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತೆರಿಗೆ ಮತ್ತು ಕಾರ್ಮಿಕರ ಕಾನೂನಿನಲ್ಲಿ ಕೆಲವು ಮಾರ್ಪಾಡು ಮಾಡುವಂತೆ ಕೋರಿದ್ದು, ನಾಸ್ಕಾಂ ಈ ಬಗ್ಗೆ ವರದಿ ಸಿದ್ಧ ಪಡಿಸುತ್ತಿದೆ. ಕಾರ್ಮಿಕ ಮತ್ತು ದೂರ ಸಂಪರ್ಕ ಖಾತೆ ಸಚಿವರಿಗೆ ಈ ಬಗ್ಗೆ ವರದಿ ಕಳುಹಿಸಿ ಮುಂದಿನ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈಗಿರುವ ಕಾನೂನು, ವರ್ಕ್ ಫ್ರಮ್ ಹೋಮ್ ಗೆ ಪೂರಕವಾಗಿಲ್ಲದ ಹಿನ್ನೆಲೆಯಲ್ಲಿ ಕಾನೂನಿನಲ್ಲಿ ಮಾರ್ಪಾಡು ಮಾಡಿ, ಹೊಸ ದೃಷ್ಟಿಕೋನದಿಂದ ಇದನ್ನು ನೋಡುವ ಅಗತ್ಯವಿದೆ ಎಂದು ಇನ್ಫೋಸಿಸ್ ಸಿಒಒ ಯು.ಬಿ.ಪ್ರವೀಣ್ ರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!
ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...








