ಕೊರೊನಾ ಹೊಡೆತಕ್ಕೆ ತತ್ತರಿಸಿದ ಭಾರತಕ್ಕೆ ವಿಶ್ವ ಬ್ಯಾಂಕ್ ನೆರವು ನೀಡಲು ಮುಂದಾಗಿದೆ. ದೇಶದಲ್ಲಿ ದಿನ ದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ದೇಶವನ್ನು ಲಾಕ್ ಡೌನ್ ಮಾಡಲಾಗಿತ್ತು. ಇದರಿಂದ ಭಾರತ ದೇಶವು ಆರ್ಥಿಕ ಸಂಕಷ್ಟ ಎದುರಿಸುವಂತಾಯಿತು. ದೇಶವನ್ನು ಆರ್ಥಿಕವಾಗಿ ಮತ್ತೆ ಬಲಿಷ್ಠಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಇದೀಗ ಈ ಪ್ರಯತ್ನಕ್ಕೆ ಬಲ ತುಂಬುವಂತೆ ವಿಶ್ವ ಬ್ಯಾಂಕ್ ಒಂದು ಬಿಲಿಯನ್ ಡಾಲರ್ ಸಾಮಾಜಿಕ ಸಂರಕ್ಷಣಾ ಪ್ಯಾಕೇಜ್ ಘೋಷಣೆ ಮಾಡಿದೆ. ಈ ಪ್ಯಾಕೇಜ್ ನಿಂದಾಗಿ ಭಾರತಕ್ಕೆ ಆರ್ಥಿಕ ನೆರವು ಲಭ್ಯವಾಗುತ್ತದೆ. ಮೊನ್ನೆಯಷ್ಟೇ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದರ ಜೊತೆಗೆ ವಿಶ್ವ ಬ್ಯಾಂಕ್ ಒಂದು ಬಿಲಿಯನ್ ಡಾಲರ್ ಪ್ಯಾಕೇಜ್ ಘೋಷಣೆ ಮಾಡಿದ್ದು ದೇಶದ ಜನರಲ್ಲಿ ಭರವಸೆ ಮೂಡಿಸಿದೆ.
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ
ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...








