World Wide : 50 ದೇಶ…. 6 ಭಾಷೆ… ಕಿಚ್ಚನ ‘ವಿಕ್ರಾಂತ್ ರೋಣ’ ನ ಘರ್ಜನೆ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’. ಇತ್ತೀಚೆಗಷ್ಟೇ ಈ ಸಿನಿಮಾದ ಟೈಟಲ್ ಲೋಗೋ ಟೀಸರ್ ಭರ್ಜರಿ ವಿಶ್ವದ ಅತಿ ಎತ್ತರದ ಕಟ್ಟಡ ದುಬೈನ ಬುರ್ಜ್ ಖಲೀಫಾದಲ್ಲಿ ಲಾಂಚ್ ಆಗಿ ಅಭಿಮಾನಿಗಳನ್ನ ಥ್ರಿಲ್ ಗೊಳಿಸಿದೆ. ಇತ್ತ ವಿಕ್ರಾಂತ್ ರೋಣ ಸಿನಿಮಾ ಯಾವಾಗ ಬಿಡುಗಡೆಯಾಗುತ್ತೆ ಎಂದು ಅಭಿಮಾನಿಗಳು ತುದಿಗಾಲಿನಲ್ಲಿ ಕಾಯ್ತಾಯಿದ್ದಾರೆ. ಈಗಾಗಲೇ, ವಿಕ್ರಾಂತ್ ರೋಣ ಚಿತ್ರದ ಪ್ರಚಾರ ಜೋರಾಗಿ ಶುರುವಾಗಿದೆ. ಬುರ್ಜ್ ಖಲೀಫಾ ಮೇಲೆ ಟೀಸರ್ ಲಾಂಚ್ ಮಾಡಿದ ಚಿತ್ರತಂಡ ಆರು ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ ಎಂದು ಖಚಿತ ಪಡಿಸಿದೆ.
ಏಪ್ರಿಲ್ 9ರಂದು ಥಿಯೇಟರ್ ಗಳಿಗೆ ಬರುತ್ತಿದ್ದಾರೆ ‘ವಕೀಲ್ ಸಾಬ್’ ..!
ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ವಿಕ್ರಾಂತ್ ರೋಣ ತೆರೆಗೆ ಬರಲಿದೆ. ಭಾರತದಲ್ಲಿ ಮಾತ್ರವಲ್ಲ ಜಗತ್ತಿನಾದ್ಯಂತ 50ಕ್ಕೂ ಹೆಚ್ಚು ದೇಶಗಳಲ್ಲಿ ಸುದೀಪ್ ಸಿನಿಮಾ ಪ್ರದರ್ಶನವಾಗಲಿದೆ ಎಂದು ಅಧಿಕೃತವಾಗಿ ಪ್ರಕಟವಾಗಿದೆ. 6 ಭಾಷೆಯಲ್ಲಿ ವಿಕ್ರಾಂತ್ ರೋಣ ಬರಲಿದೆ ಎನ್ನುವುದನ್ನು ಸ್ವತಃ ಸುದೀಪ್ ಅವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಶೇಷ ಅಂದ್ರೆ 6 ಭಾಷೆಗಳಲ್ಲೂ ಟೈಟಲ್ ಪೋಸ್ಟರ್ ಪೋಸ್ಟ್ ಮಾಡಿಕೊಂಡಿದ್ದಾರೆ. ಇತ್ತ ಈ ಸಿನಿಮಾಗೂ ಮುನ್ನವೇ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷೆಯ ಮತ್ತೊಂದು ಸಿನಿಮಾವಾಗಿರುವ ಕೋಟಿಗೊಬ್ಬ 3 ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಿದೆ. ಇದಾದ ಬಳಿಕ ವಿಕ್ರಾಂತ್ ರೋಣ ತೆರೆಮೇಲೆ ಬರಲಿದೆ. ವಿಶ್ವಾದ್ಯಂತ 50 ಕ್ಕೂ ಅಧಿಕ ದೇಶಗಳಲ್ಲಿ ಒಟ್ಟು 6 ಬಾಷೆಗಳಲ್ಲಿ ರಿಲೀಸ್ ಆಗಲಿದೆ.
‘ಆದಿಪುರುಷ್’ ಗೆ ಸ್ಟಾರ್ ನಟಿ ಎಂಟ್ರಿ : ಯಾರು ಗೊತ್ತಾ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel