ರಾಯಚೂರು : ಬೇರೆ ರಾಜ್ಯಗಳಿಂದ ಬಂದವರಿಗೆ ಕಡ್ಡಾಯ ಕ್ವಾರಂಟೈನ್ ನಿಯಮ ಜಾರಿ ಮಾಡಿದೆ. ಆದರೆ ಕ್ವಾರಂಟೈನ್ ನಲ್ಲಿದ್ದವರಿಗೆ ಆಹಾರ ನೀಡುವುದರಲ್ಲಿ ರಾಯಚೂರು ಜಿಲ್ಲಾ ಬಹುದೊಡ್ಡ ಯಡವಟ್ಟು ಮಾಡಿದೆ. ಹೌದು ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಕ್ವಾರಂಟೈನ್ ಇದ್ದವರಿಗೆ ಕಳಪೆ ಆಹಾರ ವಿತರಣೆ ಮಾಡಲಾಗುತ್ತಿದೆ. ಪಟ್ಟಣದ ಡಿಗ್ರಿ ಕಾಲೇಜಿನಲ್ಲಿ 100 ಜನ ಕ್ವಾರಂಟೈನ್ ನಲ್ಲಿ ಇದ್ದಾರೆ. ಅವರಿಗೆ ನೀಡಿದ ಊಟದಲ್ಲಿ ಕೀಟ ಪತ್ತೆಯಾಗಿದೆ. ಅಷ್ಟೇ ಅಲ್ಲದೆ ಕ್ವಾರಂಟೈನ್ ಕೇಂದ್ರಗಳಲ್ಲಿ ರಕ್ತದೊತ್ತಡ ಇದ್ದವರಿಗೆ ಹಾಗೂ ಕೆಮ್ಮು ಇದ್ದವರಿಗೆ ಮಾತ್ರೆ ಕೇಳಿದರೇ ಸೇವೆಯಲ್ಲಿರುವ ಸಿಬ್ಬಂದಿಗಳು ಕ್ಯಾರೇ ಎನ್ನುವುದಿಲ್ಲ. ಒಟ್ಟಿನಲ್ಲಿ ರಾಯಚೂರು ಜಿಲ್ಲಾಡಳಿತದ ಅಧೀನದಲ್ಲಿರುವ ದೇವದುರ್ಗ ಪಟ್ಟಣ್ಣದ ಕ್ವಾರಂಟೈನ್ ಕೇಂದ್ರದಲ್ಲಿ ಸಮಸ್ಯೆಗಳ ಸಾಗರವೇ ಎದ್ದು ಕಾಣುತ್ತಿದೆ.
ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಲಿ ಎನ್ನುವುದು ಹೆಚ್ ಡಿ ಕುಮಾರಸ್ವಾಮಿ ಆಸೆ: ಕೇಂದ್ರ ಮಂತ್ರಿಯೋ ಅಥವಾ ಪಂಚಾಯ್ತಿ ಮೆಂಬರೋ? ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಈಗ ಮತ್ತೊಂದು ಸ್ಫೋಟಕ ಹಂತಕ್ಕೆ ತಲುಪಿದೆ. ಪ್ರಜ್ವಲ್ ರೇವಣ್ಣ...








