ಕೊಪ್ಪಳ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮಸೀದಿಯ ಮುಂದೆ ಸಲ್ಲಿಸಿದ್ದನ್ನು ತಡೆಯಲು ಪೊಲೀಸರು ವಿಫಲರಾದ ಹಿನ್ನೆಲೆಯಲ್ಲಿ ಮೂವರನ್ನು ಅಮಾನತು ಮಾಡಲಾಗಿದೆ.
ಗಣೇಶ ಮೂರ್ತಿ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಪಟ್ಟಣದ ಜಾಮೀಯಾ ಮಸೀದಿ ಮುಂದೆ ಯುವಕರು ಪೂಜೆ ಸಲ್ಲಿಸಿದ್ದಾರೆ. ಆದರೆ, ಇದನ್ನು ತಡೆಯಲು ವಿಫಲರಾದ ಹಿನ್ನೆಲೆಯಲ್ಲಿ ಗಂಗಾವತಿ ನಗರ ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಮುಖ್ಯ ಪೇದೆಯೊಬ್ಬರನ್ನು ಅಮಾನತು ಮಾಡಲಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅದೇಶ ಹೊರಡಿಸಿದ್ದಾರೆ.
ಮೂರು ದಿನಗಳ ಹಿಂದೆ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಗಣೇಶ ವಾಹನ ನಲ್ಲಿಸಿ ಕುಂಬಳಿಕಾಯಿ ಒಡೆದು ಪೂಜೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಇದನ್ನು ಪೊಲೀಸರು ತಡೆದಿಲ್ಲ. ಸೂಕ್ಷ್ಮ ಪ್ರದೇಶವಿದ್ದರೂ ಮಸೀದಿ ಮುಂದೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ಲ. ಆ ಕಾರಣಕ್ಕಾಗಿ ಪ್ರಕ್ಷುಬ್ಧ ವಾತವರಣ ನಿರ್ಮಾಣವಾಗಿತ್ತು. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದಿರುವುದಕ್ಕಾಗಿ ಮೂವರ ಮೇಲೆ ಎಸ್ಪಿ ಕ್ರಮ ಕೈಗೊಂಡಿದ್ದಾರೆ.
ಮಸೀದಿ ಎದುರು ಮಂಗಳಾರತಿ ಮಾಡಿ, ‘ಗವಿ ಗಂಗಾಧರೇಶ್ವರ ಮಹಾ ರಾಜಕೀ ಜೈ’ ಎಂದು ಘೋಷಣೆ ಕೂಗಿದ ವೀಡಿಯೋ ವೈರಲ್ ಆಗಿತ್ತು. ಇದು ಕೋಮು ಗಲಭೆಗೆ ಪ್ರಚೋದನೆ ನೀಡುತ್ತದೆ ಎನ್ನುವ ಕಾರಣಕ್ಕೆ ಸೆ.30 ರಂದು ಮಂಗಳಾರತಿ ಮಾಡಿದ 4 ಜನರ ಮೇಲೆ ಪೊಲೀಸ್ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಪ್ರರಕಣ ದಾಖಲಾಗಿತ್ತು.