ಚಾಮರಾಜನಗರ : ವೀರಾಂಜನೇಯ ದೇಗುಲದಲ್ಲಿ ಏಸುಕ್ರಿಸ್ತನ ಫೋಟೊ ಇಟ್ಟು ಪೂಜೆ ಮಾಡಿರುವ ಕೊಳ್ಳೇಗಾಲದಲ್ಲಿ ನಡೆದಿದ್ದು, ಅರ್ಚಕರ ವಿರುದ್ಧ ಭಕ್ತರು ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಇದೀಗ ಅರ್ಚಕ ರಾಘವನ್ ಗುರೂಜೀ ಕ್ಷಮೆ ಕೇಳಿದ್ದು, ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಇದ್ದ ಆ.5ರಂದು ಆರ್ ಎಸ್ ಎಸ್, ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ದೇವಾಸ್ಥಾನದಲ್ಲಿ ಪೂಜೆ ಇಟ್ಟುಕೊಳ್ಳಲಾಗಿತ್ತು. ಅದೇ ದಿನ ಎಸ್ಪಿ ಕೂಡ ಇಲ್ಲಿಗೆ ಬಂದಿದ್ದರು. ಆ ವೇಳೆ ಏಸುವಿನ ಫೋಟೋ ಇಟ್ಟು ಪೂಜೆ ಮಾಡಿ ಕೊಟ್ಟಿದ್ದೇನೆ. ಇದರಲ್ಲಿ ಯಾವುದೇ ಕೆಟ್ಟ ಉದ್ದೇಶವಿಲ್ಲ. ಹಿಂದು ಸಂಪ್ರದಾಯವನ್ನು ಅವಹೇಳನ ಮಾಡುವ ಉದ್ದೇಶವಿಲ್ಲ. ಇದರಿಂದ ಯಾರಿಗಾದರೂ ಬೇಜಾರು ಆಗಿದ್ದರೆ ದಯವಿಟ್ಟು ಕ್ಷಮಿಸಬೇಕು ಎಂದು ಮನವಿ ಮಾಡಿದ್ದಾರೆ.
ಇನ್ನು ಅರ್ಚಕರು ವೀರಾಂಜನೇಯ ದೇಗುಲದಲ್ಲಿ ಕ್ರಿಸ್ತನ ಫೋಟೋ ಇಟ್ಟು ಪೂಜೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.








