ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾಗೆ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ಶಾಕ್ ನೀಡಿದೆ.
ಪುನಾ ಅವರನ್ನು ನಾಲ್ಕು ವರ್ಷಗಳ ಕಾಲ ಬ್ಯಾನ್ ಮಾಡಲಾಗಿದೆ. ಸೋನೆಪತ್ನಲ್ಲಿ ನಡೆದ ರಾಷ್ಟ್ರೀಯ ತಂಡದ ಆಯ್ಕೆಗೆ ನಡೆದ ಟ್ರಯಲ್ಸ್ನಲ್ಲಿ ಆಯ್ಕೆಯಾದ ನಂತರ ಪುನಿಯಾ ಮೂತ್ರದ ಮಾದರಿಯನ್ನು (Urine Sample) ಪರೀಕ್ಷೆಗೆ ನೀಡಲು ನಿರಾಕರಿಸಿದ್ದರು. ಇದನ್ನು ನಿಯಮ ಬಾಹಿ ಎಂದು ಪರಿಗಣಿಸಿ ನಾಲ್ಕು ವರ್ಷಗಳ ಕಾಲ ಬ್ಯಾನ್ ಮಾಡಿದೆ.
ಏಪ್ರಿಲ್ 23ರಂದು ಪುನಿಯಾರನ್ನು ನಾಡಾ ಮೊದಲ ಬಾರಿಗೆ ಅಮಾನತುಗೊಳಿಸಿತ್ತು. ನಂತರ ವಿಶ್ವ ಕುಸ್ತಿ ಆಡಳಿತ ಮಂಡಳಿ (UWW) ಸಹ ಅವರನ್ನು ಅಮಾನತು ಮಾಡಿತ್ತು. ಇದರ ವಿರುದ್ಧ ಪುನಿಯಾ ಮೇಲ್ಮನವಿ ಸಲ್ಲಿಸಿದ್ದರು. ಆದ್ರೆ ನಾಡಾದ ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್ (ADDP) ಮುಂದಿನ ಸೂಚನೆ ನೀಡುವವರೆಗೆ ಮೇಲ್ಮನವಿಯನ್ನು ರದ್ದುಗೊಳಿಸಿತ್ತು.
ನಾಡಾಗೆ ಮೂತ್ರ ಮಾದರಿಯನ್ನು ನೀಡದೇ ಇದ್ದದ್ದು ಯಾಕೆ? ಎಂದು ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಈ ಕುರಿತು ಅಕ್ಟೋಬರ್ ನಲ್ಲಿ ವಿಚಾರಣೆ ಕೂಡ ನಡೆದಿತ್ತು. ಸದ್ಯ ಆದೇಶ ಪ್ರಕಟಿಸಿರುವ ಎಡಿಡಿಪಿ, ಕಲಂ 10.3.1 ರ ಅಡಿಯಲ್ಲಿ ನಿರ್ಬಂಧಗಳಿಗೆ ಅಥ್ಲೀಟ್ ಹೊಣೆಗಾರನಾಗಿರುತ್ತಾನೆ ಮತ್ತು 4 ವರ್ಷಗಳ ಅವಧಿಗೆ ಅನರ್ಹತೆಗೆ ಹೊಣೆಗಾರನಾಗಿರುತ್ತಾನೆ ಎಂದು ಹೇಳಿದೆ.